ಐಪಿಎಲ್ 2020: ಟೂರ್ನಿಗೆ ಮಾರ್ಚ್ 29ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಚಾಲನೆ!
ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯು ಮುಂದಿನ ವರ್ಷ ಮಾರ್ಚ್ 29 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುರುವಾಗಲಿದ್ದು, ಆತಿಥೇಯ ಹಾಗೂ ನಾಲ್ಕು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತನ್ನ ತವರು ನೆಲದಲ್ಲಿ ಅಭಿಯಾನ ಆರಂಭಿಸಲಿದೆ.

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯು ಮುಂದಿನ ವರ್ಷ ಮಾರ್ಚ್ 29 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುರುವಾಗಲಿದ್ದು, ಆತಿಥೇಯ ಹಾಗೂ ನಾಲ್ಕು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತನ್ನ ತವರು ನೆಲದಲ್ಲಿ ಅಭಿಯಾನ ಆರಂಭಿಸಲಿದೆ.
ಐಪಿಎಲ್ 2020 ಟೂರ್ನಿಯ ಆರಂಭಿಕ ದಿನಾಂಕವನ್ನು ಮಾರ್ಚ್ 29ಕ್ಕೆ ನಿಗದಿಪಡಿಸಲಾಗಿದ್ದು ಹಾಲಿ ಚಾಂಪಿಯನ್ಸ್ ಮುಂಬೈ ತಂಡಕ್ಕೆ ವಾಂಖೆಡೆಯಲ್ಲಿ ತನ್ನ ಮೊದಲ ಪಂದ್ಯವನ್ನಾಡುವ ಅವಕಾಶ ಲಭ್ಯವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದರರ್ಥ ಟೂರ್ನಿಯ ಮೊದಲೆರಡು ಪಂದ್ಯಗಳನ್ನು ಆಡುವ ತಂಡಗಳಿಗೆ ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್‌ನ ಕೆಲ ಆಟಗಾರರು ಅಲಭ್ಯರಾಗಲಿದ್ದಾರೆ. ಈ ಅವಧಿಯಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ತಂಡಗಳು ಟಿ20-ಐ ಕ್ರಿಕೆಟ್ ಸರಣಿ ಮತ್ತು ಇಂಗ್ಲೆಂಡ್-ಶ್ರೀಲಂಕಾ ತಂಡಗಳು ಟೆಸ್ಟ್ ಸರಣಿಗಳಲ್ಲಿ ಆಡುವುದರಿಂದ ಪ್ರಾಥಮಿಕ ಐಪಿಎಲ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಈ ಎರಡೂ ಸರಣಿಗಳು ಮಾರ್ಚ್ 31ರಂದು ಅಂತ್ಯಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


