ಟೀಂ ಇಂಡಿಯಾ ಪಾಲಿಗೆ ಆಪದ್ಭಾಂಧವರಾದ ರಾಯುಡು, ವಿಜಯ್, ಪಾಂಡ್ಯಾ, ಕಿವೀಸ್ ಗೆ 253 ರನ್ ಗುರಿ
ಅಂಬಾಟಿ ರಾಯುಡು, ವಿಜಯ್ ಶಂಕರ್ ಮತ್ತು ಹಾರ್ದಿಕ್ ಪಾಂಡ್ಯಾ ಅಮೋಘ ಬ್ಯಾಟಿಂಗ್ ನೆರವಿನಿಂದಾಗಿ ಭಾರತ ತಂಡ ಆರಂಭಿಕ ಆಘಾತದಿಂದ ಚೇತರಿಸಿಕೊಂಡು ನ್ಯೂಜಿಲೆಂಡ್ ತಂಡಕ್ಕೆ 253 ರನ್ ಗಳ ಗುರಿ ನೀಡಿದೆ.

Published On :
ಹ್ಯಾಮಿಲ್ಟನ್: ಅಂಬಾಟಿ ರಾಯುಡು, ವಿಜಯ್ ಶಂಕರ್ ಮತ್ತು ಹಾರ್ದಿಕ್ ಪಾಂಡ್ಯಾ ಅಮೋಘ ಬ್ಯಾಟಿಂಗ್ ನೆರವಿನಿಂದಾಗಿ ಭಾರತ ತಂಡ ಆರಂಭಿಕ ಆಘಾತದಿಂದ ಚೇತರಿಸಿಕೊಂಡು ನ್ಯೂಜಿಲೆಂಡ್ ತಂಡಕ್ಕೆ 253 ರನ್ ಗಳ ಗುರಿ ನೀಡಿದೆ.
ವೆಲ್ಲಿಂಗ್ಟನ್ ನ ವೆಸ್ಟ್ ಪ್ಯಾಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐದನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡ 49.5 ಓವರ್ ನಲ್ಲಿ 252 ರನ್ ಗಳಿಗೆ ಆಲೌಟ್ ಆಯಿತು. ಒಂದು ಹಂತದಲ್ಲಿ ಕೇವಲ 18 ರನ್ ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಕಳೆದು ತೀವ್ರ ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಅಂಬಾಟಿ ರಾಯುಡು (90 ರನ್) ಮತ್ತು ವಿಜಯ್ ಶಂಕರ್ (45 ರನ್) ಆಪದ್ಭಾಂಧವರಾಗಿ ನಿಂತರು. ಈ ಜೋಡಿ ಐದನೇ ವಿಕೆಟ್ ಜೊತೆಯಾಟದಲ್ಲಿ ಭಾರತಕ್ಕೆ ಅತ್ಯಮೂಲ್ಯ 98 ರನ್ ಗಳ ಜೊತೆಯಾಟವಾಡಿದರು.
ಆದರೆ ಇನ್ನಿಂಗ್ಸ್ ನ 32 ನೇ ಓವರ್ ನಲ್ಲಿ ಅರ್ಧಶತಕದ ಹೊಸ್ತಿಲಲ್ಲಿದ್ದ ವಿಜಯ್ ಶಂಕರ್ ರನೌಟ್ ಗೆ ಬಲಿಯಾದರು. ಬಳಿಕ ರಾಯುಡು ಜೊತೆಗೂಡಿದ ಕೇದರ್ ಜಾಧವ್ ಕೂಡ ಉತ್ತಮ ಸಾಥ್ ನೀಡಿದರು. ಈ ಜೋಡಿ ಕೂಡ 74 ರನ್ ಗಳ ಅಮೂಲ್ಯ ಕೊಡುಗೆ ನೀಡಿತು. ಈ ಹೊತ್ತಿಗಾಗಲೇ ಅರ್ಧಶತಕ ಸಿಡಿಸಿ 90 ರನ್ ಗಳಿಸಿದ್ದ ಅಂಬಾಟಿ ರಾಯುಡು ಮ್ಯಾಟ್ ಹೆನ್ರಿ ಬೌಲಿಂಗ್ ನಲ್ಲಿ ಔಟ್ ಆಗಿ ಶತಕ ವಂಚಿತರಾದರು. ಬಳಿಕ ಕ್ರೀಸ್ ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯಾ ಮೈದಾನದಲ್ಲಿ ಅಕ್ಷರಶಃ ಮಿಂಚು ಹರಿಸಿದರು.
ಕೇವಲ 22 ಎಸೆತಗಳನ್ನು ಎದುರಿಸಿದ ಪಾಂಡ್ಯಾ ಹ್ಯಾಟ್ರಿಕ್ ಸಿಕ್ಸರ್ ಗಳ ಸಮೇತ ಒಟ್ಟು 5 ಸಿಕ್ಸರ್ ಮತ್ತು 2 ಬೌಂಡರ್ ಗಳ ನೆರವಿನಿಂದಾಗಿ 45 ರನ್ ಸಿಡಿಸಿದರು. ಇವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಾಗಿ ಭಾರತ ತಂಡ 250 ರನ್ ಗಳ ಗಡಿ ದಾಟಿತು ಎನ್ನಬಹುದು. ಅಂತೆಯೇ ಕೇದಾರ್ ಜಾದವ್ ಕೂಡ 34 ರನ್ ಗಳ ಅಮೂಲ್ಯ ಕಾಣಿಕೆ ನೀಡಿದರು.
ಅಂತಿಮವಾಗಿ ಭಾರತ ತಂಡ 49.5 ಓವರ್ ನಲ್ಲಿ 252 ರನ್ ಗಳಿ ಆಲೌಟ್ ಆಯಿತು. ಆ ಮೂಲಕ ನ್ಯೂಜಿಲೆಂಡ್ ಗೆ ಗೆಲ್ಲಲು 253 ರನ್ ಗಳ ಸವಾಲಿನ ಗುರಿ ನೀಡಿತು.
ಇನ್ನು ನ್ಯೂಜಿಲೆಂಡ್ ಪರ ಮ್ಯಾಟ್ ಹೆನ್ರಿ 4 ವಿಕೆಟ್ ಪಡೆದರೆ, ಟ್ರೆಂಟ್ ಬೌಲ್ಟ್ 3 ವಿಕೆಟ್ ಪಡೆದು ಮಂಚಿದರು. ಅಂತೆಯೇ ನೀಶಮ್ ಕೂಡ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


