ಕ್ರಿಕೆಟ್

5ನೇ ಏಕದಿನ ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಆತಿಥೇಯ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

5ನೇ ಏಕದಿನ ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಟಾಸ್ ಗೆದ್ದ ರೋಹಿತ್ ಶರ್ಮಾ
Published On :
ವೆಲ್ಲಿಂಗ್ಟನ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ವೆಲ್ಲಿಂಗ್ಟನ್ ನ ವೆಸ್ಟ್ ಪ್ಯಾಕ್ ಸ್ಟೇಡಿಯಂನಲ್ಲಿ 5ನೇ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ವಿಶ್ರಾಂತಿ ನೀಡಲಾಗಿದ್ದ ತಂಡದ ಹಿರಿಯ ಆಟಗಾರ ಹಾಗೂ ಮಾಸ್ಟರ್ ಮೈಂಡ್ ಮಹೇಂದ್ರ ಸಿಂಗ್ ಧೋನಿ ಅಂತಿಮ ಪಂದ್ಯಕ್ಕೆ ವಾಪಸ್ ಆಗಿದ್ದು, ಅಂತೆಯೇ ವೇಗಿ ಮಹಮದ್ ಶಮಿ ಕೂಡ ತಂಡ ಸೇರಿಕೊಂಡಿದ್ದಾರೆ.
ಅತ್ತ ಕಿವೀಸ್ ಪಡೆಗೆ ಗಾಯದ ಸಮಸ್ಯೆ ಕಾಡುತ್ತಿದ್ದು, ನ್ಯೂಜಿಲೆಂಡ್ ನ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ಗಾಯದ ಸಮಸ್ಯೆಯಿಂದಾಗಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ಮತ್ತೋರ್ವ ಆಟಗಾರ ಕೊಲಿನ್ ಮುನ್ರೋ ಅವರನ್ನು ಆಯ್ಕೆ ಮಾಡಲಾಗಿದೆ.
ತಂಡಗಳು ಇಂತಿವೆ:
ನ್ಯೂಜಿಲೆಂಡ್
ಹೆನ್ರಿ ನಿಕೋಲ್ಸ್, ಕಾಲಿನ್ ಮುನ್ರೋ, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಕೋಲಿನ್ ಡಿ ಗ್ರ್ಯಾಂಡ್ ಹೋಮ್, ಟಾಡ್ ಆ್ಯಸ್ಟಲ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್
ಭಾರತ
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶುಭ ಮನ್ ಗಿಲ್, ಅಂಬಾಟಿ ರಾಯುಡು, ಎಂಎಸ್ ಧೋನಿ (ವಿಕೆಟ್ ಕೀಪರ್), ಕೇದಾರ ಜಾಧವ್, ಹಾರ್ದಿಕ್ ಪಾಂಡ್ಯ, ವಿಜಯ್ ಶಂಕರ್, ಭುವನೇಶ್ವರ ಕುಮಾರ್, ಮೊಹಮ್ಮದ್ ಶಮಿ, ಯುಜುವೇಂದ್ರ ಚಹಾಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.