ವೆಲ್ಲಿಂಗ್ಟನ್ ನಲ್ಲಿ ಅಂಬಾಟಿ ಅಬ್ಬರಕ್ಕೆ, ಕೊಹ್ಲಿ, ಧೋನಿ ದಾಖಲೆ ಪತನ!
ಆತಿಥೇಯ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಆರಂಭದಲ್ಲೇ 4 ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಗಿದ್ದ ಭಾರತ ತಂಡವನ್ನು ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಚೇತರಿಸಿಕೊಳ್ಳುವಂತೆ ಮಾಡಿದ್ದ ಅಂಬಾಟಿ ರಾಯುಡು ವಿಶೇಷ ದಾಖಲೆ ಬರೆದಿದ್ದಾರೆ.

Published On :
ವೆಲ್ಲಿಂಗ್ಟನ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಆರಂಭದಲ್ಲೇ 4 ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಗಿದ್ದ ಭಾರತ ತಂಡವನ್ನು ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಚೇತರಿಸಿಕೊಳ್ಳುವಂತೆ ಮಾಡಿದ್ದ ಅಂಬಾಟಿ ರಾಯುಡು ವಿಶೇಷ ದಾಖಲೆ ಬರೆದಿದ್ದಾರೆ.
ವೆಲ್ಲಿಂಗ್ಟನ್ ನಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಅಂತಿಮ ಏಕಪಂದ್ಯದಲ್ಲಿ ಭಾರತ ತಂಡ 35 ರನ್ ಗಳ ಭರ್ಜರಿ ಗೆಲುವು ದಾಖಲಿಸಿತಾದರೂ, ಒಂದು ಹಂತದಲ್ಲಿ 4ನೇ ಪಂದ್ಯದಂತೆ ಈ ಪಂದ್ಯದಲ್ಲೂ ಭಾರತ ತಂಡ ಹೀನಾಯ ಸೋಲುವ ಕಾಣವು ಸಾದ್ಯತೆ ಇತ್ತು. ಕೇವಲ 18 ರನ್ ಗಳಿಗೆ ಭಾರತದ ಘಟಾನುಘಟಿ ಬ್ಯಾಟ್ಸಮನ್ ಗಳಾದ ರೋಹಿತ್ ಶರ್ಮಾ, ಶಿಖರ್ ಧವನ್, ಶುಭ್ ಮನ್ ಗಿಲ್ ಹಾಗೂ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಕಳೆದುಕೊಂಡ ಭಾರತ ಹೀನಾಯ ಸ್ಥಿತಿಯಲ್ಲಿತ್ತು. ಆದರೆ ಈ ವೇಳೆ ಎಚ್ಚರಿಕೆಯ ಆಟವಾಡಿದ ಅಂಬಾಟಿ ರಾಯುಡು (90) ಮತ್ತು ವಿಜಯ್ ಶಂಕರ್ (45) ತಂಡಕ್ಕೆ ಆಸರೆಯಾದರು. ಇನ್ನು ಕೊನೆಯಲ್ಲಿ ಅಬ್ಬರಿಸುವ ಮೂಲಕ ಯುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡದ ಮೊತ್ತವನ್ನು 250 ರ ಗಡಿ ದಾಟಿಸಿದರು.
113 ಎಸೆತಗಳನ್ನು ಎದುರಿಸಿದ ರಾಯುಡು, 4 ಭರ್ಜರಿ ಸಿಕ್ಸರ್ ಹಾಗೂ 8 ಬೌಂಡರಿಗಳೂ ಸೇರಿದಂತೆ ಒಟ್ಟು 90 ರನ್ ಗಳ ಅಮೂಲ್ಯ ಕಾಣಿಕೆ ನೀಡಿದರು. ಆ ಮೂಲಕ ವೆಲ್ಲಿಂಗ್ಟನ್ ಪಿಚ್ ನಲ್ಲಿ ಭಾರತದ ಪರ ಅತೀ ಹೆಚ್ಚು ವೈಯುಕ್ತಿಕ ಗರಿಷ್ಠ ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾದರು. ಅಂತೆಯೇ ರಾಯುಡು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನೂ ಹಿಂದಿಕ್ಕಿದ್ದಾರೆ. ಈ ಮೈದಾನದಲ್ಲಿ ಕೊಹ್ಲಿ 82 ರನ್ ಗಳಿಸಿದ್ದು, ಧೋನಿ 47 ರನ್ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್indiaಭಾರತAmbati RayuduNew Zealandನ್ಯೂಜಿಲೆಂಡ್ವೆಲ್ಲಿಂಗ್ಟನ್WellingtonCricket Offbeatಅಂಬಾಟಿ ರಾಯುಡು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


