ನ್ಯೂಜಿಲೆಂಡ್ ನೆಲದಲ್ಲಿ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡ ಭಾರತ, ಯಾವುದು ಆ ಸಾಧನೆ?
ಆತಿಥೇಯ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈ ವಶ ಮಾಡಿಕೊಂಡ ಭಾರತ ತಂಡ ಅಪರೂಪದ ಸಾಧನೆ ಗೈದಿದ್ದು, ವಿಶ್ವದಲ್ಲಿ ಈ ಸಾಧನೆ ಗೈದ 3ನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

Published On :
ವೆಲ್ಲಿಂಗ್ಟನ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈ ವಶ ಮಾಡಿಕೊಂಡ ಭಾರತ ತಂಡ ಅಪರೂಪದ ಸಾಧನೆ ಗೈದಿದ್ದು, ವಿಶ್ವದಲ್ಲಿ ಈ ಸಾಧನೆ ಗೈದ 3ನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.
ಹೌದು.. ವೆಲ್ಲಿಂಗ್ಟನ್ ನಲ್ಲಿ ನಡೆದ ಐದನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 35 ರನ್ ಗಳ ಅಂತರದ ಭರ್ಜರಿ ಜಯ ಸಾಧಿಸುವ ಮೂಲಕ 5 ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಲ್ಲಿ ಜಯಿಸಿಕೊಂಡಿತು. ಆ ಮೂಲಕ ನ್ಯೂಜಿಲೆಂಡ್ ನೆಲದಲ್ಲಿ ಇಂತಹ ಸಾಧನೆ ಮಾಡಿದ ವಿಶ್ವದ ಮೂರನೇ ತಂಡ ಎಂಬ ಕೀರ್ತಿಗೆ ಟೀಂ ಇಂಡಿಯಾ ಭಾಜನವಾಯಿತು.
ಇದಕ್ಕೂ ಮೊದಲು ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಈ ಸಾಧನೆ ಮಾಡಿದ್ದವು. 1999/2000 ರಲ್ಲಿ ನಡೆದಿದ್ದ 5 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 4-1 ಅಂತರದಲ್ಲಿ ಜಯಸಿತ್ತು. ಅದಾದ ಬಳಿಕ 2000/2001ರಲ್ಲಿ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದ ಶ್ರೀಲಂಕಾ ಕೂಡ 5 ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಲ್ಲಿ ಜಯಸಿತ್ತು.
ಇದೀಗ ಈ ಸಾಧನೆಯನ್ನು ಭಾರತ ತಂಡ ಮಾಡಿ ತೋರಿಸಿದೆ.
Looks like the "JOSH" in the squad is "HIGH SIR"
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


