ನ್ಯೂಜಿಲ್ಯಾಂಡ್ ವಿರುದ್ಧ ಹೀನಾಯವಾಗಿ ಸೋತ ಟೀಂ ಇಂಡಿಯಾ ಮಹಿಳಾ ಹಾಗೂ ಪುರುಷರ ತಂಡ!
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಹೀನಾಯವಾಗಿ ಸೋಲು ಕಂಡಿತ್ತು. ಇದರ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ...

Published On :
ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಹೀನಾಯವಾಗಿ ಸೋಲು ಕಂಡಿತ್ತು. ಇದರ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ ಪುರುಷರ ತಂಡ ಸಹ 80 ರನ್ ಗಳಿಂದ ಹೀನಾಯ ಸೋಲು ಕಂಡಿದೆ.
ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಬ್ಯಾಟ್ಸ್‌ಮನ್‌ಗಳು ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದು 6 ವಿಕೆಟ್ ನಷ್ಟಕ್ಕೆ 219 ರನ್ ಗಳನ್ನು ಪೇರಿಸಿತ್ತು. ನ್ಯೂಜಿಲ್ಯಾಂಡ್ ನೀಡಿದ 220 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 139 ರನ್ ಗಳಿಗೆ ಆಲೌಟ್ ಆಗಿದ್ದು 80 ರನ್ ಗಳಿಂದ ಹೀನಾಯ ಸೋಲು ಕಂಡಿದೆ.
ಭಾರತ ಪರ ಶಿಖರ್ ಧವನ್ 29, ವಿಜಯ್ ಶಂಕರ್ 27, ಎಂಎಸ್ ಧೋನಿ 39 ಹಾಗೂ ಹಾರ್ದಿಕ್ ಪಾಂಡ್ಯ 20 ರನ್ ಪೇರಿಸಿದ್ದಾರೆ.
ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಸೌಥೆ 3, ಫರ್ಗ್ಯೂಸನ್, ಸಾನ್ಟ್ನೇರ್, ಸೋದಿ ಮತ್ತು ಕುಗೆಲಿಜೆನ್ ತಲಾ 2 ವಿಕೆಟ್ ಪಡೆದಿದ್ದಾರೆ.
ನ್ಯೂಜಿಲ್ಯಾಂಡ್ ಪರ ಸೈಫರ್ಟ್ 84, ಮನ್ರೋ 34, ಕೇನ್ ವಿಲಿಯಮ ಸನ್ 34, ಟೇಲರ್ 23 ಹಾಗೂ ಕುಗೆಲೀಜೆನ್ ಅಜೇಯ 20 ರನ್ ಪೇರಿಸಿದ್ದರು.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 2, ಭುವನೇಶ್ವರ್ ಕುಮಾರ್, ಅಹ್ಮದ್, ಕೃನಾಲ್ ಪಾಂಡ್ಯ, ಚಹಾಲ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


