ಕ್ರಿಕೆಟ್

ರೋಹಿತ್ ಅರ್ಧ ಶತಕ: ಟೀಂ ಇಂಡಿಯಾಗೆ ಗೆಲುವು, ಸರಣಿ ಸಮಬಲ!

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ತಂಡದ ನಾಯಕ ರೋಹಿತ್ ಶರ್ಮಾ ಬಿರುಸಿನ ಅರ್ಧ ಶತಕ ಬಾರಿಸಿದ್ದು ಟೀಂ ಇಂಡಿಯಾ 7 ವಿಕೆಟ್ ಗಳ ಅಂತರದಿಂದ ಗೆಲುವು ದಾಖಲಿಸಿದೆ.

ರೋಹಿತ್ ಅರ್ಧ ಶತಕ: ಟೀಂ ಇಂಡಿಯಾಗೆ ಗೆಲುವು, ಸರಣಿ ಸಮಬಲ!
ಟೀಂ ಇಂಡಿಯಾ
Published On :
ಆಕ್ಲೆಂಡ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ತಂಡದ ನಾಯಕ ರೋಹಿತ್ ಶರ್ಮಾ ಬಿರುಸಿನ ಅರ್ಧ ಶತಕ ಬಾರಿಸಿದ್ದು ಟೀಂ ಇಂಡಿಯಾ 7 ವಿಕೆಟ್ ಗಳ ಅಂತರದಿಂದ ಗೆಲುವು ದಾಖಲಿಸಿದೆ. 
ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದೆ. ಮಡು ಇಲ್ಲವೆ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ತಂಡವನ್ನು 158 ರನ್ ಗಳಿಗೆ ಕಟ್ಟಿಹಾಕಿತ್ತು. 159 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 18.5 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 162 ರನ್ ಪೇರಿಸಿ ಗೆಲುವಿನ ನಗೆ ಬೀರಿತು.
ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಉತ್ತಮ ಆರಂಭ ಹಾಕಿಕೊಟ್ಟರು. ರೋಹಿತ್ ಶರ್ಮಾ 50 ರನ್ ಗಳಿಸಿ ಔಟಾದರೆ, ಶಿಖರ್ ಧವನ್ 30 ರನ್ ಬಾರಿಸಿ ಔಟಾದರು. ನಂತರ ಬಂದ ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ಮಾಡಿ ಅಜೇಯ 40 ಹಾಗೂ ಎಂಎಸ್ ಧೋನಿ ಅಜೇಯ 20 ರನ್ ಪೇರಿಸಿ ತಂಡವನ್ನು ಗೆಲುವಿನ ತಡ ಮುಟ್ಟಿಸಿದರು.
ನ್ಯೂಜಿಲ್ಯಾಂಡ್ ಪರ ಗ್ರ್ಯಾಂಡ್ ಹೋಮ್ 50, ಲಾಸ್ ಟೇಲರ್ 42 ಹಾಗೂ ಕೇನ್ ವಿಲಿಯಮ್ ಸನ್ 20 ರನ್ ಪೇರಿಸಿದ್ದಾರೆ.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಕೃಣಾಲ್ ಪಾಂಡ್ಯ 3, ಅಹ್ಮದ್ 2, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.