ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ವಿರೋಚಿತ ಸೋಲು, ಟಿ20 ಸರಣಿ ಗೆದ್ದ ಕಿವೀಸ್!

ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಕಂಡಿದೆ.

ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ವಿರೋಚಿತ ಸೋಲು, ಟಿ20 ಸರಣಿ ಗೆದ್ದ ಕಿವೀಸ್!
ಸಂಗ್ರಹ ಚಿತ್ರ
Published On :
ಹ್ಯಾಮಿಲ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಕಂಡಿದೆ. 
ಹ್ಯಾಮಿಲ್ಟನ್ ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ಪರ ಆರಂಭಿಕರಾದ ಮನ್ರೋ ಹಾಗೂ ಟಿಮ್ ಸಿಫೇರ್ಟ್ ಭರ್ಜರಿ ಬ್ಯಾಟಿಂಗ್ ಮಾಡಿದರು. ಪರಿಣಾಮ ನ್ಯೂಜಿಲ್ಯಾಂಡ್ 4 ವಿಕೆಟ್ ನಷ್ಟಕ್ಕೆ 212 ರನ್ ಪೇರಿಸಿತ್ತು. 213 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 208 ರನ್ ಬಾರಿಸಿದ್ದು 4 ರನ್ ಗಳಿಂದ ವಿರೋಚಿತ ಸೋಲು ಕಂಡಿದೆ. 
ಟೀಂ ಇಂಡಿಯಾ ಪರ ಶಿಖರ್ ಧವನ್ 5, ರೋಹಿತ್ ಶರ್ಮಾ 38, ವಿಜಯ್ ಶಂಕರ್ 43, ರಿಷಬ್ ಪಂತ್ 28, ಹಾರ್ದಿಕ್ ಪಾಂಡ್ಯ 21 ರನ್ ಪೇರಿಸಿದ್ದಾರೆ. 
ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಡರೇಲ್ ಮಿಚೆಲ್, ಸ್ಯಾನ್ಟರ್ ತಲಾ 2 ವಿಕೆಟ್ ಪಡೆದಿದ್ದಾರೆ. 
ನ್ಯೂಜಿಲ್ಯಾಂಡ್ ಪರ ಸಿಫೇರ್ಟ್ 43, ಮನ್ರೋ 72, ಮಿಲಿಯಮ್ ಸನ್ 27 ಹಾಗೂ ಗ್ರ್ಯಾಂಡ್ ಹೋಮ್ 30 ರನ್ ಗಳಿಸಿದ್ದಾರೆ.
ಭಾರತ ಪರ ಕುಲದೀಪ್ ಯಾದವ್ 2, ಭುವನೇಶ್ವರ್ ಕುಮಾರ್ ಹಾಗೂ ಅಹ್ಮದ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.