ಐಸಿಸಿ ಟಿ20 ಶ್ರೇಯಾಂಕ: ಕುಲದೀಪ್ ಯಾದವ್ ವೃತ್ತಿ ಬದುಕಿನ ಅತ್ಯುತ್ತಮ ಸಾಧನೆ!
ಟೀಂ ಇಂಡಿಯಾದ ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ವೃತ್ತಿ ಬದುಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ಟಿ20 ರ್ಯಾಂಕಿಂಗ್ ನ ಬೌಲಿಂಗ್ ವಿಭಾಗದಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

Published On :
ದುಬೈ: ಟೀಂ ಇಂಡಿಯಾದ ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ವೃತ್ತಿ ಬದುಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ಟಿ20 ರ್ಯಾಂಕಿಂಗ್ ನ ಬೌಲಿಂಗ್ ವಿಭಾಗದಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 2 ವಿಕೆಟ್ ಪಡೆದಿದ್ದರು. ಪರಿಣಾಮ ಕುಲದೀಪ್ ಯಾದವ್ ಬೌಲರ್ ವಿಭಾಗದಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಇನ್ನು ಯಜುವೇಂದ್ರ ಚಹಾಲ್ 17ನೇ ಸ್ಥಾನ ಹಾಗೂ ಭುವನೇಶ್ವರ್ ಕುಮಾರ್ 18ನೇ ಸ್ಥಾನಕ್ಕೇ ಇಳಿದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಆಫ್ಘಾನಿಸ್ತಾನ ತಂಡದ ಖ್ಯಾತ ಬೌಲರ್ ರಶೀದ್ ಖಾನ್ 793 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಪಾಕಿಸ್ತಾನದ ಬಾಬರ್ ಅಜಾಮ್ 885 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ. ನ್ಯೂಜಿಲ್ಯಾಂಡ್ ತಂಡದ ಬ್ಯಾಟ್ಸ್ ಮನ್ 825 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್ಟೀಂ ಇಂಡಿಯಾTeam IndiaNew Zealandನ್ಯೂಜಿಲ್ಯಾಂಡ್Cricket Offbeat3ನೇ ಟಿ20Kuldeep Yadavಕುಲದೀಪ್ ಯಾದವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


