ಯುದ್ಧಕ್ಕೆ ಯುದ್ಧವೇ ಪ್ರತ್ಯುತ್ತರ; ಇಮ್ರಾನ್ ಖಾನ್ ಹೇಳಿಕೆಗೆ ಶಾಹಿದ್ ಆಫ್ರಿದಿ ಬೆಂಬಲ!
ಪುಲ್ವಾಮಾ ಉಗ್ರ ದಾಳಿ ಬಳಿಕ ಹಲವು ಆಟಗಾರರು ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಬಾಯ್ ಕಟ್ ಮಾಡಿ ಎಂದು ಕೇಳುತ್ತಿದ್ದು ಈ ಮಧ್ಯೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ...

Published On :
ಪುಲ್ವಾಮಾ ಉಗ್ರ ದಾಳಿ ಬಳಿಕ ಹಲವು ಆಟಗಾರರು ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಬಾಯ್ ಕಟ್ ಮಾಡಿ ಎಂದು ಕೇಳುತ್ತಿದ್ದು ಈ ಮಧ್ಯೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಮಾತ್ರ ಪಾಕ್ ಪಿಎಂ ಇಮ್ರಾನ್ ಖಾನ್ ಅವರ ಯುದ್ಧಕ್ಕೆ ಯುದ್ಧವೇ ಉತ್ತರ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.
ಪುಲ್ವಾಮಾ ಭಯೋತ್ಪಾದನಾ ದಾಳಿಯನ್ನು ಖಂಡಿಸಿದ ಭಾರತದ ಕೆಲ ಕ್ರಿಕೆಟ್ ಮಂಡಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಂತಾಪವನ್ನು ಹಂಚಿಕೊಂಡಿವೆ.
ಇನ್ನು ಫೆಬ್ರವರಿ 14ರಂದು ಪುಲ್ವಾಮಾ ಉಗ್ರ ದಾಳಿಯಲ್ಲಿ ತನ್ನ ದೇಶದ ಯಾವುದೇ ಪಾತ್ರವಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು. ಅಲ್ಲದೆ ಯಾವುದೇ ಪ್ರತೀಕಾರದ ಕ್ರಮ ಕೈಗೊಂಡರೆ ನಾವು ಅದಕ್ಕೆ ಅದೇ ರೀತಿಯಲ್ಲಿ ಉತ್ತರ ನೀಡುತ್ತೇವೆ. ಇನ್ನು ಪುಲ್ವಾಮಾ ದಾಳಿ ಕುರಿತಂತೆ ಸಾಕ್ಷ್ಯಾಧಾರವನ್ನು ಹೊಂದಿಗಿಸಿದರೆ ಆಗ ಈ ಕುರಿತು ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದರು.
ಇಮ್ರಾನ್ ಖಾನ್ ಹೇಳಿಕೆ ವಿಡಿಯೋ ಟ್ವೀಟ್ ಮಾಡಿರುವ ಶಾಹಿದ್ ಆಫ್ರಿದಿ ಅವರು ಇಮ್ರಾನ್ ಖಾನ್ ಸಂಪೂರ್ಣವಾಗಿ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
Absolutely crystal&Clear
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತಇಮ್ರಾನ್ ಖಾನ್Imran KhanPakistanಪಾಕಿಸ್ತಾನShahid Afridiಶಾಹಿದ್ ಆಫ್ರಿದಿPulwama Terror Attackಪುಲ್ವಾಮಾ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


