ವಿಶ್ವಕಪ್ ಕ್ರಿಕೆಟ್ ಟೂರ್ನಿಯಿಂದ ಪಾಕಿಸ್ತಾನ ಬ್ಯಾನ್..! ಬಿಸಿಸಿಐ ಹೇಳಿದ್ದೇನು?
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಬೇಡ ಎಂಬ ಮಾತು ಜೋರಾಗಿ ಕೇಳಿ ಬರುತ್ತಿದ್ದು, ಈ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ಪಷ್ಟನೆ ನೀಡಿದೆ.

Published On :
ಮುಂಬೈ: ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಬೇಡ ಎಂಬ ಮಾತು ಜೋರಾಗಿ ಕೇಳಿ ಬರುತ್ತಿದ್ದು, ಈ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ಪಷ್ಟನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಮೂಲಗಳು, 'ಬಿಸಿಸಿಐ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವ ಸುಪ್ರೀಂ ಕೋರ್ಟ್ ನೇಮಿತ ಆಡಳಿತಗಾರರ ಸಮಿತಿ (ಸಿಒಎ) ಈ ಸಂಬಂಧ ಶಶಾಂಕ್ ಮನೋಹರ್ ಗೆ ಪತ್ರದ ಕರಡು ಪ್ರತಿ ರೆಡಿ ಮಾಡಿದ್ದು ಐಸಿಸಿಗೆ ಮನವಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಅಲ್ಲದೆ, ಐಸಿಸಿಗೆ ಮಾಹಿತಿ ನೀಡುವ ಬಗ್ಗೆ ಸಿಒಎ ಮುಖ್ಯಸ್ಥ ವಿನೋದ್ ರಾಯ್ ಈ ಸಂಬಂಧ ಕಾನೂನು ಸಮಾಲೋಚನೆಗಳನ್ನು ಪಡೆದ ಬಳಿಕ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ರಾಯ್ ಒಪ್ಪಿಗೆ ಪಡೆದು ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ ಕಚೇರಿಯಲ್ಲಿ ಈ ಕರಡು ಪತ್ರೆವನ್ನು ರೆಡಿ ಮಾಡಲಾಗಿದೆ ಎನ್ನಲಾಗಿದೆ.
ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ಉಗ್ರ ದಾಳಿ ಬಳಿಕ, ವಿಶ್ವಕಪ್ ಸರಣಿಯಿಂದ ಪಾಕಿಸ್ತಾನ ತಂಡವನ್ನು ಬ್ಯಾನ್ ಮಾಡಬೇಕೆಂದು ಬಿಸಿಸಿಐ ಅಭಿಪ್ರಾಯ ಪಟ್ಟಿದ್ದು, ಈ ಕುರಿತು ಮನವಿ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಐಸಿಸಿಗೆ ಪತ್ರ ಕಳಿಸುವ ಬಗ್ಗೆ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಆದರೆ ಐಸಿಸಿಗೆ ಈ ಬಗ್ಗೆ ಯಾವುದೇ ಮೌಖಿಕ ಅಥವಾ ಅನಧಿಕೃತ ಸಂವಹನವನ್ನು ಬಿಸಿಸಿಐ ನೀಡಿಲ್ಲ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್MumbaiಮುಂಬೈindiaಭಾರತPakistanಪಾಕಿಸ್ತಾನBCCIಬಿಸಿಸಿಐPulwama Terror Attackಪುಲ್ವಾಮ ಉಗ್ರ ದಾಳಿICC Cricket World Cup 2019ಐಸಿಸಿ ಕ್ರಿಕೆಟ್ ವಿಶ್ವಕಪ್ 201
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


