ಕ್ರಿಕೆಟ್ ಮಾತ್ರವಲ್ಲ, ಪಾಕಿಸ್ತಾನದ ವಿರುದ್ಧ ಎಲ್ಲ ಕ್ರೀಡೆಗಳನ್ನು ಕೈಬಿಡಬೇಕು: ಸೌರವ್ ಗಂಗೂಲಿ
ಪುಲ್ವಾಮ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಪಾತ್ರಕ್ಕೆ ಸಂಬಂಧಿಸಿದಂತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಕೇವಲ ಕ್ರಿಕೆಟ್ ಮಾತ್ರವಲ್ಲದೆ ಪಾಕಿಸ್ತಾನ ಜತೆಗಿನ ಎಲ್ಲ ಕ್ರೀಡಾ ಸಂಬಂಧಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

Published On :
ಮುಂಬೈ: ಪುಲ್ವಾಮ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಪಾತ್ರಕ್ಕೆ ಸಂಬಂಧಿಸಿದಂತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಕೇವಲ ಕ್ರಿಕೆಟ್ ಮಾತ್ರವಲ್ಲದೆ ಪಾಕಿಸ್ತಾನ ಜತೆಗಿನ ಎಲ್ಲ ಕ್ರೀಡಾ ಸಂಬಂಧಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಪುಲ್ವಾಮ ಉಗ್ರ ದಾಳಿಯ ಪ್ರತಿಭಟನಾರ್ಥವಾಗಿ ಪಾಕಿಸ್ತಾನದ ವಿರುದ್ದ ವಿಶ್ವಕಪ್ ಪಂದ್ಯಗಳನ್ನುಭಾರತ ಬಹಿಷ್ಕರಿಸಬೇಕು ಎಂಬ ಚರ್ಚೆ ವ್ಯಾಪಕವಾಗಿರುವಂತೆಯೇ ಇದಕ್ಕೆ ಧನಿ ಗೂಡಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಕ್ರಿಕೆಟ್ ಮಾತ್ರವಲ್ಲದೇ ಎಲ್ಲ ಕ್ರೀಡೆಗಳಲ್ಲೂ ಪಾಕ್ ಜತೆಗಿನ ಸಂಬಂಧ ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ.
'ವಿಶ್ವಕಪ್ 10 ತಂಡಗಳ ಟೂರ್ನಿ ಆಗಿದ್ದು, ಲೀಗ್ ಹಂತದಲ್ಲಿ ಎಲ್ಲ ತಂಡಗಳು ಎದುರಾಗಲಿದೆ. ಹಾಗಾಗಿ ಪ್ರತಿಭಟನೆಯ ಭಾಗವಾಗಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಕೈಬಿಡಬೇಕು ಎಂಬುದು ನನ್ನ ಅನಿಸಿಕೆಯಾಗಿದೆ ಎಂದು ಗಂಗೂಲಿ ಹೇಳಿದರು. ಅಂತೆಯೇ ಭಾರತವಿಲ್ಲದೆ ವಿಶ್ವಕಪ್ ಆಯೋಜಿಸುವುದು ಐಸಿಸಿ ಪಾಲಿಗೆ ನಿಜಕ್ಕೂ ಕಠಿಣವಾಗಲಿದೆ. ಕ್ರಿಕೆಟ್ ನಲ್ಲಿ ಭಾರತ ಪ್ರಬಲ ರಾಷ್ಟ್ರವಾಗಿದೆ. ವೈಯುಕ್ತಿಕವಾಗಿಯೂ ಸ್ಪಷ್ಟ ಸಂದೇಶವೊಂದು ರವಾನಿಸಬೇಕಿದೆ ಎಂದು ದಾದಾ ಹೇಳಿದ್ದಾರೆ.
ಭಾರತೀಯ ಜನತೆಯಿಂದ ಮೂಡಿಬಂದಿರುವ ಜನಾಗ್ರಹ ನಿಜಕ್ಕೂ ಸರಿಯೆನಿಸಿದೆ. ಪಾಕಿಸ್ತಾನ ವಿರುದ್ಧ ದ್ವಿಪಕ್ಷೀಯ ಸರಣಿ ಸಾಧ್ಯವೇ ಇಲ್ಲ. ಕೇವಲ ಕ್ರಿಕೆಟ್ ಮಾತ್ರವಲ್ಲದೆ ಫುಟ್ಬಾಲ್, ಹಾಕಿ ಹೀಗೆ ಎಲ್ಲ ಕ್ರೀಡೆಗಳಿಂದಲೂ ಹಿಂದೆ ಸರಿಯಬೇಕು ಎಂದು ಗಂಗೂಲಿ ನುಡಿದರು. ಅದೇ ಹೊತ್ತಿಗೆ ಒಂದು ವೇಳೆ ವಿಶ್ವಕಪ್ ಸೆಮಿಫೈನಲ್ ಅಥವಾ ಫೈನಲ್‌ನಲ್ಲಿ ಮತ್ತದೇ ಪಾಕಿಸ್ತಾನ ಎದುರಾದರೆ ಅಲ್ಲೂ ಪ್ರತಿಭಟನೆಯ ಭಾಗವಾಗಿ ಹಿಂದೆ ಸರಿಯಬೇಕೇ ಎಂಬುದರ ಕುರಿತಾಗಿ ಗಂಗೂಲಿ ವಿವರಣೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್MumbaiಮುಂಬೈindiaಭಾರತPakistanಪಾಕಿಸ್ತಾನBCCIಬಿಸಿಸಿಐPulwama Terror Attackಪುಲ್ವಾಮ ಉಗ್ರ ದಾಳಿICC Cricket World Cup 2019ಐಸಿಸಿ ಕ್ರಿಕೆಟ್ ವಿಶ್ವಕಪ್ 201
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


