ಕ್ರಿಕೆಟ್ ವಿಶ್ವಕಪ್ 2019: ದಾದಾ ಪ್ರಕಾರ ಇದು ಅವರ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡ!
ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಪ್ರಕಾರ ಈ ತಂಡ ಈ ಬಾರಿ ವಿಶ್ವಕಪ್ ಗೆಲ್ಲುವ ಫೇವರಿಟ್ ತಡವಂತೆ. ಇಷ್ಟಕ್ಕೂ ಯಾವುದು ಆ ತಂಡ ಗೊತ್ತಾ..?

Published On :
ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಪ್ರಕಾರ ಈ ತಂಡ ಈ ಬಾರಿ ವಿಶ್ವಕಪ್ ಗೆಲ್ಲುವ ಫೇವರಿಟ್ ತಡವಂತೆ. ಇಷ್ಟಕ್ಕೂ ಯಾವುದು ಆ ತಂಡ ಗೊತ್ತಾ..?
ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಪ್ರಕಾರ ಈ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆಲ್ಲುವ ಫೇವರಿಟ್ ತಂಡವಂತೆ. ಇದಕ್ಕೆ ಕಾರಣವನ್ನೂ ನೀಡಿರುವ ಗಂಗೂಲಿ, ಕಳೆದ 6-7 ತಿಂಗಳಿಂದ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಈ ಮೂಲಕ ಉತ್ತಮ ಪೂರ್ವ ಸಿದ್ಧತೆಯನ್ನು ಮಾಡಿಕೊಂಡಿದೆ. ಈಗಿನ ಭಾರತ ತಂಡವನ್ನು ಅತ್ಯುತ್ತಮ ತಂಡ. ಅಲ್ಲದೆ ಎಲ್ಲ ಆಟಗಾರರು ಉತ್ತಮ ನಿರ್ವಹಣೆ ನೀಡಿದ್ದು, ಉತ್ತಮ ಫಾರ್ಮ್ ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ನಿನ್ನೆಯಷ್ಟೇ ಪುಲ್ವಾಮ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಗಂಗೂಲಿ, ಪಾಕಿಸ್ತಾನ ಜತೆಗಿನ ಕ್ರಿಕೆಟ್ ಬಾಂಧವ್ಯವನ್ನು ಕೈಬಿಡುವಂತೆ ಮನವಿ ಮಾಡಿಕೊಂಡಿದ್ದರು. ಅಲ್ಲದೆ ಪಾಕಿಸ್ತಾನ ವಿರುದ್ಧ ವಿಶ್ವಕಪ್‌ನಲ್ಲಿ ಆಡಕೂಡದು ಎಂದೂ ಆಗ್ರಹಿಸಿದ್ದ ಗಂಗೂಲಿ, ಕೇವಲ ಕ್ರಿಕೆಟ್ ಮಾತ್ರವಲ್ಲದೇ ಪಾಕಿಸ್ತಾನದೊಂದಿಗೆ ಯಾವುದೇ ರೀತಿಯ ಕ್ರೀಡಾ ಬಾಂಧವ್ಯ ಹೊಂದಬಾರದು ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CricketನವದೆಹಲಿNew DelhiTeam Indiaಸುಪ್ರೀಂ ಕೋರ್ಟ್Sourav GangulyICCಕಾಶ್ಮೀರಿಗಳುಪುಲ್ವಾಮ ಉಗ್ರ ದಾಳಿCricket World Cup 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


