ಕ್ರಿಕೆಟ್

ಪುಲ್ವಾಮ ಉಗ್ರ ದಾಳಿ: ಕೈಗೆ ಕಪ್ಪು ಪಟ್ಟಿ ಕಟ್ಟಿ ಹುತಾತ್ಮಯೋಧರ ನೆನೆದ ಕ್ರಿಕೆಟಿಗರು

ಪ್ರವಾಸಿ ಆಸ್ಟ್ರೇಲಿಯಾ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಕ್ರಿಕೆಟಿಗರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಳ್ಳುವ ಮೂಲಕ ಪುಲ್ವಾಮ ಉಗ್ರದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಕೆ ಮಾಡಿದ್ದಾರೆ.

ಪುಲ್ವಾಮ ಉಗ್ರ ದಾಳಿ: ಕೈಗೆ ಕಪ್ಪು ಪಟ್ಟಿ ಕಟ್ಟಿ ಹುತಾತ್ಮಯೋಧರ ನೆನೆದ ಕ್ರಿಕೆಟಿಗರು
ಆಸ್ಟ್ರೇಲಿಯಾ ವಿರುದ್ದದ ಮೊದಲ ಟಿ20 ಪಂದ್ಯ
Published On :
ವಿಶಾಖಪಟ್ಟಣಂ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಕ್ರಿಕೆಟಿಗರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಳ್ಳುವ ಮೂಲಕ ಪುಲ್ವಾಮ ಉಗ್ರದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಕೆ ಮಾಡಿದ್ದಾರೆ.
ಹೌದು.. ವಿಶಾಖಪಟ್ಟಣಂನ ವಿಡಿಸಿಎ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತೀಯ ಕ್ರಿಕೆಟಿಗರು ತಮ್ಮ ಎಡಗೈ ತೋಳಿಗೆ ಕಪ್ಪು ಪಟ್ಟಿಕೊಂಡು ಮೈದಾನಕ್ಕಿಳಿದರು. ಆ ಮೂಲಕ ಪುಲ್ವಾಮ ಉಗ್ರದಾಳಿಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವ ಕಾರ್ಯಮಾಡಿದರು. ಅಲ್ಲದೆ ದಾಳಿಯಲ್ಲಿ ಹುತಾತ್ಮರಾದ 44 ಮಂದಿ ಯೋಧರಿಗೆ ನಮನ ಸಲ್ಲಿಕೆ ಮಾಡಿದರು.
ಕಳೆದ ಫ್ರೆಬ್ರವರಿ 14ರಂದು ಪುಲ್ವಾಮ ಸಮೀಪ ಕರ್ತವ್ಯ ನಿಯೋಜನೆಗೆ ತೆರಳುತ್ತಿದ್ದ ಭಾರತೀಯ ಸೇನೆಯ ಸೇನಾ ವಾಹನಗಳ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ ಸುಮಾರು 44 ಯೋಧರನ್ನು ಕೊಂದು ಹಾಕಲಾಗಿತ್ತು. ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಾಕಿಸ್ತಾನದ ನಡೆಯನ್ನು ಭಾರತ ಟೀಕಿಸಿದ್ದು, ಇತ್ತೀಚೆಗೆ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲೂ ಪುಲ್ವಾಮ ಉಗ್ರ ದಾಳಿಗೆ ತೀವ್ರ ಖಂಡನೆ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.