ಹುತಾತ್ಮ ಯೋಧರಿಗೆ ಮೌನಾಚರಣೆ ವೇಳೆ ಪ್ರೇಕ್ಷಕರಿಗೆ ಸುಮ್ಮನಿರಿ ಎಂದ ಕೊಹ್ಲಿ, ವಿಡಿಯೋ ವೈರಲ್!
ಪುಲ್ವಾಮಾ ಉಗ್ರ ದಾಳಿಯಲ್ಲಿ 40 ಭಾರತೀಯ ಯೋಧರು ಹುತಾತ್ಮರಾಗಿದ್ದು ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರು ತೋಳಿಗೆ ಕಪ್ಪಪಟ್ಟಿ ಧರಿಸಿ ಕ್ರೀಡಾಂಗಣಕ್ಕೆ ಇಳಿಯಿತು.

Published On :
ಹೈದರಾಬಾದಾ: ಪುಲ್ವಾಮಾ ಉಗ್ರ ದಾಳಿಯಲ್ಲಿ 40 ಭಾರತೀಯ ಯೋಧರು ಹುತಾತ್ಮರಾಗಿದ್ದು ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರು ತೋಳಿಗೆ ಕಪ್ಪಪಟ್ಟಿ ಧರಿಸಿ ಕ್ರೀಡಾಂಗಣಕ್ಕೆ ಇಳಿಯಿತು.
ಇನ್ನು ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರು ಸರದಿ ಸಾಲಿನಲ್ಲಿ ನಿಂತು ಹುತಾತ್ಮ ಯೋಧರಿಗೆ 2 ನಿಮಷಗಳ ಮೌನಾಚರಣೆ ಮೂಲಕ ಗೌರವ ಸಲ್ಲಿಸುವ ವೇಳೆ ಪ್ರೇಕ್ಷಕರು ಕೂಗುತ್ತಿದ್ದರು ಇದರಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಬಾಯಿಯ ಮೇಲೆ ಬೆರಳಿಟ್ಟು ಸುಮ್ಮನಿರುವಂತೆ ಸೂಚಿಸಿದರು.
ಇತ್ತೀಚೆಗಷ್ಟೇ ಐಪಿಎಲ್ ಸಮಿತಿ ಕೂಡ ಉದ್ಘಾಟನೆಗೆ ಬ್ರೇಕ್ ಆಗಿದ್ದು ಇದರಿಂದ ಉಳಿಯುವ 15 ಕೋಟಿ ರುಪಾಯಿಯನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡಲು ತೀರ್ಮಾನಿಸಿತ್ತು.
ಇದೇ ವೇಳೆ ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಜೂನ್ 16ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಮಾತುಗಳು ಕೇಳಿಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿCricket Offbeatಕ್ರಿಕೆಟ್ ಸ್ವಾರಸ್ಯPulwama Martyrsಪುಲ್ವಾಮಾ ಹುತಾತ್ಮ ಯೋಧರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


