ಟೆಸ್ಟ್ ಸರಣಿ ಗೆದ್ದು ಇತಿಹಾಸ ಬರೆದ ಟೀಂ ಇಂಡಿಯಾಗೆ ಇಮ್ರಾನ್ ಖಾನ್ ಹೇಳಿದ್ದು!
ಆಸ್ಟ್ರೇಲಿಯಾ ನೆಲದಲ್ಲಿ 71 ವರ್ಷಗಳ ಬಳಿಕ ಕಾಂಗರೂಗಳನ್ನು ಬಗ್ಗು ಬಡಿದು ಬಾರ್ಡರ್ ಗವಾಸ್ಕರ್ ಟ್ರೋಫಿ ಎತ್ತಿ ಹಿಡಿದ ಟೀಂ ಇಂಡಿಯಾಗೆ ದೇಶ-ವಿದೇಶಗಳಿಂದ...

Published On :
ಇಸ್ಲಾಮಾಬಾದ್: ಆಸ್ಟ್ರೇಲಿಯಾ ನೆಲದಲ್ಲಿ 71 ವರ್ಷಗಳ ಬಳಿಕ ಕಾಂಗರೂಗಳನ್ನು ಬಗ್ಗು ಬಡಿದು ಬಾರ್ಡರ್ ಗವಾಸ್ಕರ್ ಟ್ರೋಫಿ ಎತ್ತಿ ಹಿಡಿದ ಟೀಂ ಇಂಡಿಯಾಗೆ ದೇಶ-ವಿದೇಶಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದ್ದು ಶತ್ರು ರಾಷ್ಟ್ರ ಪಾಕಿಸ್ತಾನ ಪ್ರಧಾನಿ ಸಹ ಟೀಂ ಇಂಡಿಯಾ ಆಟಗಾರರಿಗೆ ಅಭಿನಂದನೆ ತಿಳಿಸಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ.
ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 2-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟ್ರೋಪಿ ಎತ್ತಿ ಹಿಡಿದಿತ್ತು.
ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಕ್ರಿಕೆಟ್ ಸಾಧನೆ ಆಸ್ಟ್ರೇಲಿಯಾದಲ್ಲಿ ಹೋರಾಡಿ, ಅರ್ಹ ಸರಣಿ ಗೆದ್ದ ಟೀಂ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. ಈ ಸರಣಿ ಅತ್ಯುತ್ತಮ ಪ್ರದರ್ಶನ ಹಾಗೂ ಒಗ್ಗಟ್ಟಿಗೆ ಸಾಕ್ಷಿಯಾಗಿದೆ. ಮುಂದಿನ ಪಂದ್ಯಗಳಲ್ಲಿಯೂ ಒಳ್ಳೆಯದಾಗಲಿ ಎಂದು ಪ್ರಧಾನಿ ಮೋದಿ ಟ್ವಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಆಸ್ಟ್ರೇಲಿಯಾಟೀಂ ಇಂಡಿಯಾAustraliaTeam Indiaಇಮ್ರಾನ್ ಖಾನ್Imran KhanPakistanಪಾಕಿಸ್ತಾನVirat Kohliವಿರಾಟ್ ಕೊಹ್ಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


