ವಿರಾಟ್ ಕೊಹ್ಲಿ ಮತ್ತು ರವಿಶಾಸ್ತ್ರಿಗೆ ಎಸ್‌ಸಿಜಿ ಸದಸ್ಯತ್ವದ ಗೌರವ!
ಕ್ರಿಕೆಟ್ ಗೆ ನೀಡಿದ ಕೊಡುಗೆಯನ್ನು ಗೌರವಿಸಿ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣ(ಎಸ್‌ಸಿಜಿ) ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪ್ರಧಾನ ಕೋಚ್ ರವಿಶಾಸ್ತ್ರಿಗೆ ಎಸ್‌ಸಿಜಿ ಸದಸ್ಯತ್ವದ ಗೌರವವನ್ನು ನೀಡಲಾಗಿದೆ.

Published On :
ಸಿಡ್ನಿ: ಕ್ರಿಕೆಟ್ ಗೆ ನೀಡಿದ ಕೊಡುಗೆಯನ್ನು ಗೌರವಿಸಿ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣ(ಎಸ್‌ಸಿಜಿ) ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪ್ರಧಾನ ಕೋಚ್ ರವಿಶಾಸ್ತ್ರಿಗೆ ಎಸ್‌ಸಿಜಿ ಸದಸ್ಯತ್ವದ ಗೌರವವನ್ನು ನೀಡಲಾಗಿದೆ.
71 ವರ್ಷಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಐತಿಹಾಸಕ ಸಾಧನೆ ಮಾಡಿತ್ತು. ಈ ಸಾಧನೆ ಹಿನ್ನಲೆ ಎಸ್‌ಸಿಜಿ ಮುಖ್ಯಸ್ಥ ಟೋನಿ ಶೆಫರ್ಡ್ ಅವರು ಕೊಹ್ಲಿ ಮತ್ತು ರವಿಶಾಸ್ತ್ರಿಗೆ ಸದಸ್ಯತ್ವ ನೀಡಿ ಗೌರವಿಸಿದರು.
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ವೆಸ್ಟ್ ಇಂಡೀಸ್ ತಂಡದ ಮಾಜಿ ಆಟಗಾರ ಬ್ರಿಯಾನ್ ಲಾರಾ ಬಳಿಕ ಇದೀಗ ವಿರಾಟ್ ಕೊಹ್ಲಿ ಹಾಗೂ ರವಿಶಾಸ್ತ್ರಿ ಈ ಗೌರವಕ್ಕೆ ಭಾಜನರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾAustraliaVirat Kohliವಿರಾಟ್ ಕೊಹ್ಲಿRavi shastriರವಿಶಾಸ್ತ್ರಿCricket Offbeatಕ್ರಿಕೆಟ್ ಸ್ವಾರಸ್ಯSCG Membershipಎಸ್‌ಸಿಜಿ ಸದಸ್ಯತ್ವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


