ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ: ಭಾರತಕ್ಕೆ 289 ರನ್ ಗಳ ಗುರಿ
ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ 289 ರನ್ ಗಳ ಗುರಿ ನೀಡಿದೆ.

Published On :
ಸಿಡ್ನಿ: ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ 289 ರನ್ ಗಳ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿತು.
ಭುವನೇಶ್ವರ್ ಕುಮಾರ್ 2 ನೇ ಓವರ್ ನಲ್ಲೇ ಆಸಿಸ್ ನಾಯಕ ಫಿಂಚ್ ನ್ನು ಪೆವಿಲಿಯನ್ ಗೆ ಕಳಿಸುವ ಮೂಲಕ ಎದುರಾಳಿ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಕುಲ್ದೀಪ್ ಯಾದವ್ ಆಸ್ಟ್ರೇಲಿಯಾದ ಓಪನರ್ ಅಲೆಕ್ಸ್ ನ್ನು ಪೆವಿಲಿಯನ್ ಗೆ ಕಳಿಸುವ ವೇಳೆಗೆ ಆಸ್ಟ್ರೆಲಿಯ ತಂಡ 9.5 ಓವರ್ ಗಳಿಗೆ 2 ವಿಕೆಟ್ ಕಳೆದುಕೊಂಡು 41 ರನ್ ಗಳಿಸಿತ್ತು. 40 ನೇ ಓವರ್ ವೇಳೆಗೆ ಭಾರತದ ಬೌಲರ್ ಗಳು ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಗಳ ಮೇಲೆ ಹಿಡಿತ ಸಾಧಿಸಿ 288 ರನ್ ಗಳಿಗೆ ಎದುರಾಳಿ ತಂಡದ ಆಟಗಾರರನ್ನು ಕಟ್ಟಿಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


