10,000 ರನ್ ದಾಖಲೆ, ಅರ್ಧ ಶತಕ ಬಾರಿಸಿದ್ರೂ ಧೋನಿ ವಿರುದ್ಧ ಟ್ವೀಟರಿಗರು ಕಿಡಿಕಾರಲು ಕಾರಣವೇನು?
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ಸಾವಿರ ರನ್ ಬಾರಿಸಿ ಮೈಲುಗಲ್ಲು ಸೃಷ್ಟಿಸಿದರು.

Published On :
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ಸಾವಿರ ರನ್ ಬಾರಿಸಿ ಮೈಲುಗಲ್ಲು ಸೃಷ್ಟಿಸಿದರು. ಇನ್ನು ಪಂದ್ಯವನ್ನು ಟೀಂ ಇಂಡಿಯಾ ಸೋತಿದ್ದು ಧೋನಿ ಅರ್ಧ ಶತಕ ಸಿಡಿಸಿದ್ದರ ಅವರ ವಿರುದ್ಧ ಟ್ವೀಟರಿಗರು ಮುಗಿಬಿದ್ದಿದ್ದಾರೆ.
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 34 ರನ್ ಗಳಿಂದ ಜಯ ಗಳಿಸಿತ್ತು. ಈ ಪಂದ್ಯದಲ್ಲಿ ಎಂಎಸ್ ಧೋನಿ ನಿಧಾನಗತಿಯ ಬ್ಯಾಟಿಂಗ್ ಮಾಡಿ ಅರ್ಧ ಶತಕ ಪೂರೈಸಿದ್ದರು. ಧೋನಿ 51 ರನ್ ಬಾರಿಸಲು ಬರೋಬ್ಬರಿ 96 ಎಸೆತಗಳನ್ನು ತೆಗೆದುಕೊಂಡಿದ್ದರು. ಇದು ಟ್ವೀಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಧೋನಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರಿಂದಲೇ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ದ ಸೋಲಬೇಕಾಯಿತು ಎಂದು ಟ್ವೀಟಿಸುತ್ತಿದ್ದಾರೆ. ಇನ್ನು ಧೋನಿ ಈ ಮೂಲಕ ತಾವು ಇನ್ನು ಟೆಸ್ಟ್ ಕ್ರಿಕೆಟ್ ನಲ್ಲಿ ಆಡಲು ಸಮರ್ಥರು ಎಂದು ತೋರಿಸಿಕೊಟ್ಟಿದ್ದಾರೆ ಎಂದು ಕಾಲೆಳೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaSydneyMS Dhoniಸಿಡ್ನಿಎಂಎಸ್ ಧೋನಿCricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


