ಎಂಎಸ್ ಧೋನಿ, ಆ್ಯಡಂ ಗಿಲ್‌ಕ್ರಿಸ್ಟ್ ದಾಖಲೆ ಮುರಿದ ಪಾಕ್ ನಾಯಕ ಸರ್ಫರಾಜ್ ಅಹ್ಮದ್!
ಟೀಂ ಇಂಡಿಯಾದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಆಸ್ಟ್ರೇಲಿಯಾ ಮಾಜಿ ಆಟಗಾರ ಆ್ಯಡಂ ಗಿಲ್‌ಕ್ರಿಸ್ಟ್ ಕೀಪಿಂಗ್ ನಲ್ಲಿ...

Published On :
ಇಸ್ಲಾಮಾಬಾದ್: ಟೀಂ ಇಂಡಿಯಾದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಆಸ್ಟ್ರೇಲಿಯಾ ಮಾಜಿ ಆಟಗಾರ ಆ್ಯಡಂ ಗಿಲ್‌ಕ್ರಿಸ್ಟ್ ಕೀಪಿಂಗ್ ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದು ಈ ಪೈಕಿ ಪಾಕಿಸ್ತಾನದ ನಾಯಕ ಸರ್ಫರಾಜ್ ಅಹ್ಮದ್ ಒಂದು ದಾಖಲೆಯೊಂದನ್ನು ಮುರಿದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸರ್ಫರಾಜ್ ಅಹ್ಮದ್ ಒಟ್ಟಾರೆ 10 ಕ್ಯಾಚ್ ಗಳನ್ನು ಹಿಡಿಯುವ ಮೂಲಕ ಈ ಇಬ್ಬರು ದಿಗ್ಗಜ ಕೀಪರ್ ಗಳ ದಾಖಲೆಯನ್ನು ಮುರಿದಿದ್ದಾರೆ.
ಮಹೇಂದ್ರ ಸಿಂಗ್ ಧೋನಿ 2014ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ 8 ಕ್ಯಾಚ್ ಗಳನ್ನು ಹಿಡಿದಿದ್ದರು.
2004ರಲ್ಲಿ ಆ್ಯಡಂ ಗಿಲ್‌ಕ್ರಿಸ್ಟ್ ಅವರು ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ 8 ಕ್ಯಾಚ್ ಗಳನ್ನು ಹಿಡಿದಿದ್ದರು. ಇನ್ನು 1998ರಲ್ಲಿ ಇಂಗ್ಲೇಡ್ ತಂಡದ ಆಟಗಾರನಾಗಿದ್ದ ಅಲೇಸ್ ಸ್ಟೀವರ್ತ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 8 ಕ್ಯಾಚ್ ಗಳನ್ನು ಹಿಡಿಯುವ ಮೂಲಕ ದಾಖಲೆ ಬರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನMS Dhoniಎಂಎಸ್ ಧೋನಿAdam GilchristCricket Offbeatಕ್ರಿಕೆಟ್ ಸ್ವಾರಸ್ಯಸರ್ಫರಾಜ್ ಅಹ್ಮದ್Sarfaraz Ahmedಆ್ಯಡಂ ಗಿಲ್‌ಕ್ರಿಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


