ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಬ್ಯಾಟಿಂಗ್‌ಗೆ ಆಸ್ಟ್ರೇಲಿಯಾ ಕೋಚ್ ಶ್ಲಾಘನೆ!
ವಿರಾಟ್ ಕೊಹ್ಲಿಯನ್ನು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ಹೋಲಿಕೆ ಮಾಡಿರುವ ಆಸ್ಟ್ರೇಲಿಯಾ ಕೋಚ್ ಜಸ್ಟಿನ್ ಲಾಂಗರ್, ಕೊಹ್ಲಿ 360 ಡಿಗ್ರಿಯಲ್ಲೂ ಬ್ಯಾಟ್...

Published On :
ಅಡಿಲೇಡ್: ವಿರಾಟ್ ಕೊಹ್ಲಿಯನ್ನು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ಹೋಲಿಕೆ ಮಾಡಿರುವ ಆಸ್ಟ್ರೇಲಿಯಾ ಕೋಚ್ ಜಸ್ಟಿನ್ ಲಾಂಗರ್, ಕೊಹ್ಲಿ 360 ಡಿಗ್ರಿಯಲ್ಲೂ ಬ್ಯಾಟ್ ಬೀಸುವುದು ನಿಜಕ್ಕೂ ಅತ್ಯಾದ್ಭುತ ಎಂದು ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ 6 ವಿಕೆಟ್ ಗಳಿಂದ ಜಯ ಗಳಿಸಿದ್ದು ಈ ಪಂದ್ಯದಲ್ಲಿ ಆರ್ಭಟಿಸಿದ್ದ ವಿರಾಟ್ ಕೊಹ್ಲಿ ಭರ್ಜರಿ 104 ರನ್ ಸಿಡಿಸಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಸಚಿನ್ ತೆಂಡೂಲ್ಕರ್ ರಂತೆ ವಿರಾಟ್ ಕೊಹ್ಲಿ ಸಹ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಛಾಪು ಮೂಡಿಸುತ್ತಿದ್ದಾರೆ. ಸಚಿನ್ ಬ್ಯಾಟ್ ಹಿಡಿದು ಆಡುತ್ತಿದ್ದರೆ ಅವರ ಆಟ ಅದ್ಭುತವಾಗಿರುತ್ತದೆ. ನನ್ನ ತಂಡದಲ್ಲಿ ಈ ಇಬ್ಬರು ಆಟಗಾರರನ್ನು ಹೊಂದಲು ಬಯಸುತ್ತೇನೆ ಎಂದರು.
ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 298 ರನ್ ಪೇರಿಸಿತ್ತು. 299 ರನ್ ಗುರಿ ಬೆನ್ನಟ್ಟಿದ ಭಾರತ ಇನ್ನೂ 4 ಎಸೆತ ಬಾಕಿ ಇರುವಂತೆ 299 ರನ್ ಸಿಡಿಸುವ ಮೂಲಕ ರೋಚಕ ಗೆಲುವು ಸಾಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaVirat Kohliವಿರಾಟ್ ಕೊಹ್ಲಿJustin Langerಜಸ್ಟಿಂಗ್ ಲಾಂಗರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


