ಕ್ರಿಕೆಟ್

ಪಾಂಡ್ಯ, ರಾಹುಲ್ ವಿವಾದ: ಒಂಬುಡ್ಸ್ ಮನ್ ನೇಮಕ ಕೋರಿ ಸುಪ್ರೀಂಗೆ ಮನವಿ, ಮುಂದಿನ ವಾರ ವಿಚಾರಣೆ

ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರ ವಿವಾದಾತ್ಮಕ ಹೇಳಿಕೆ ಪ್ರಕರಣದ ಕುರಿತು ತನಿಖೆ...

ಪಾಂಡ್ಯ, ರಾಹುಲ್ ವಿವಾದ: ಒಂಬುಡ್ಸ್ ಮನ್ ನೇಮಕ ಕೋರಿ ಸುಪ್ರೀಂಗೆ ಮನವಿ, ಮುಂದಿನ ವಾರ ವಿಚಾರಣೆ
ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್
Published On :
ನವದೆಹಲಿ: ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರ ವಿವಾದಾತ್ಮಕ ಹೇಳಿಕೆ ಪ್ರಕರಣದ ಕುರಿತು ತನಿಖೆ ನಡೆಸಲು ತುರ್ತಾಗಿ ಒಂಬಡ್ಸ್ ಮನ್ ನೇಮಕ ಮಾಡಬೇಕು ಎಂದು ಕೋರಿ ಬಿಸಿಸಿಐ ಆಡಳಿತಗಾರರ ಸಮಿತಿ(ಸಿಒಎ) ಗುರುವಾರ ಸುಪ್ರೀಂ ಕೋರ್ಟ್ ಮನವಿ ಮಾಡಿದೆ.
ಬಿಸಿಸಿಐ ಮನವಿಯನ್ನು ಸ್ಪೀಕರಿಸಿದ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಹಾಗೂ ನ್ಯಾಯಮೂರ್ತಿ ಎಎಂ ಸಪ್ರೆ ಅವರು, ಮುಂದಿನ ವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.
ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್. ರಾಹುಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತುಗೊಳಿಸಲಾಗಿದೆ.
ಅಸಭ್ಯ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಮಾನತು ಶಿಕ್ಷೆ ಎದುರಿಸುತ್ತಿರುವ ಈ ಇಬ್ಬರು ಆಟಗಾರರು ಬೇಷರತ್ ಕ್ಷಮೆಯಾಚಿಸಿದ್ದಾರೆ. ಆದರೆ ಬೇಷರತ್ ಕ್ಷಮೆಗೆ ತೃಪ್ತರಾಗದ ಬಿಸಿಸಿಐನ 10 ಸದಸ್ಯರು ಈ ಸಂಬಂಧ ವಿಶೇಷ ಸಾಮಾನ್ಯ ಸಭೆ ಕರೆದು, ಪ್ರಕರಣ ಕುರಿತ ತನಿಖೆಗೆ ಒಂಬುಡ್ಸ್ ಮನ್ ನೇಮಕ ಮಾಡುವಂತೆ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.