ಕೊಹ್ಲಿಯನ್ನೇ ಹಿಂದಿಕ್ಕಿದ್ದ ಜಡೇಜಾ ವೇಗದ ರನೌಟ್, ವಿಡಿಯೋ ವೈರಲ್!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ರನ್ನಿಂಗ್ ರೇಸ್ ನಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ್ದ ರವೀಂದ್ರ ಜಡೇಜಾ...

Published On :
ಅಡಿಲೇಡ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ರನ್ನಿಂಗ್ ರೇಸ್ ನಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ್ದ ರವೀಂದ್ರ ಜಡೇಜಾ ಇದೀಗ ಆಸೀಸ್ ವಿರುದ್ಧದ ಪಂದ್ಯದಲ್ಲಿ ವೇಗವಾಗಿ ರನೌಟ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ರವೀಂದ್ರ ಜಡೇಜಾ ಅತ್ಯುತ್ತಮ ಫೀಲ್ಡಿಂಗ್ ಮಾಡಿ ಉಸ್ಮಾನ್ ಖವಾಜರನ್ನು ರನೌಟ್ ಮಾಡಿದ್ದರು. ಕುಲದೀಪ್ ಬೌಲಿಂಗ್ ನಲ್ಲಿ ಖವಾಜ ಬಲಗಡೆ ಹೊಡೆದು ರನ್ ಕದಿಯಲು ಯತ್ನಿಸಿದರು. ಈ ವೇಳೆ ಕವರ್ ಪಾಯಿಂಟ್ ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಜಡೇಜಾ ಓಡಿ ಬಂದು ಒಂದೇ ಕೈಯಲ್ಲಿ ಚೆಂಡನ್ನು ಹಿಡಿದು ನೇರವಾಗಿ ವಿಕೆಟ್ ಗೆ ಗುರಿಯಿಟ್ಟು ಹೊಡೆದರು.
ಖವಾಜ ಬ್ಯಾಟನ್ನು ಕ್ರೀಸ್ ಗೆ ಮುಟ್ಟಿಸುವಷ್ಟರಲ್ಲಿ ಜಡೇಜಾ ಎಸೆದ ಚೆಂಡು ವಿಕೆಟ್ ಬಡಿದು ರನೌಟ್ ಆಗಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾRavindra Jadejaರವೀಂದ್ರ ಜಡೇಜಾUsman Khawajaಉಸ್ಮಾನ್ ಖವಾಜCricket Offbeatಕ್ರಿಕೆಟ್ ಸ್ವಾರಸ್ಯrun outರನೌಟ್Tame India
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


