ಕ್ರಿಕೆಟ್

ಮನುಷ್ಯ ತಪ್ಪು ಮಾಡೋದು ಸಹಜ: ಪಾಂಡ್ಯ, ರಾಹುಲ್ ಬೆಂಬಲಕ್ಕೆ ನಿಂತ ಗಂಗೂಲಿ

ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು, ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಆಸ್ಟ್ರೇಲಿಯಾ....

ಮನುಷ್ಯ ತಪ್ಪು ಮಾಡೋದು ಸಹಜ: ಪಾಂಡ್ಯ, ರಾಹುಲ್ ಬೆಂಬಲಕ್ಕೆ ನಿಂತ ಗಂಗೂಲಿ
ಸೌರವ್ ಗಂಗೂಲಿ
Published On :
ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು, ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ  ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತುಗೊಂಡಿರುವ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರ ಬೆಂಬಲಕ್ಕೆ ನಿಂತಿದ್ದು, ಮನುಷ್ಯ ತಪ್ಪು ಮಾಡುವುದು ಸಹಜ. ಆದರೆ ಆ ತಪ್ಪುಗಳು ಮರುಕಳುಹಿಸದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
ಇಂದಿನ ಆಧುನಿಕ ಯುಗದ ಕ್ರಿಕೆಟಿಗರು ಸಾರ್ವಜನಿಕ ವೇದಿಕೆಗಳಲ್ಲಿ ತುಂಬಾ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು. ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರು ಹೇಳಿಕೆ ನೀಡಿದ ಎಪಿಸೋಡ್ ಅನ್ನು ನಾನು ನೋಡಿಲ್ಲ. ಜನ ತಪ್ಪು ಮಾಡುತ್ತಾರೆ. ಆದರೆ ಅದನ್ನೇ ದೊಡ್ಡದು ಮಾಡಬಾರದು. ಅವರಿಗೆ ಈಗ ತಮ್ಮ ತಪ್ಪಿನ ಅರಿವಾಗಿದೆ ಮತ್ತು ಮುಂದೆ ಉತ್ತಮ ವ್ಯಕ್ತಿಗಳಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಗಂಗೂಲಿ ಹೇಳಿದ್ದಾರೆ.
ನಾವು ಎಲ್ಲಾ ಮನುಷ್ಯರು. ಯಂತ್ರಗಳಲ್ಲ. ಹೀಗಾಗಿ ತಪ್ಪು ಮಾಡುವುದು ಸಹಜ. ಅವರು ಸಹ ಜವಾಬ್ದಾರಿಯುತ ವ್ಯಕ್ತಿಗಳಾಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ. ಯಾವುದೋ ಒತ್ತಡದಲ್ಲಿ ಆ ರೀತಿ ಹೇಳಿರಬಹುದು ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ಭಾರತ ಸುನೀಲ್ ಗವಾಸ್ಕರ್, ಸಚಿನ್ ತೆಂಡಲ್ಕೂರ್ ಹಾಗೂ ವಿರಾಟ್ ಕೊಹ್ಲಿಯಂತಹ ಗ್ರೇಟ್ ಕ್ರಿಕೆಟ್ ರಗಳನ್ನು ನೀಡಿದೆ ಎಂದು ಮಾಜಿ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.