ಕೊಹ್ಲಿ ಮತ್ತೊಂದು ದಾಖಲೆ; ಆಸಿಸ್ ನೆಲದಲ್ಲಿ ಟೆಸ್ಟ್ ಮತ್ತು ಏಕದಿನ ಸರಣಿ ಗೆದ್ದ ಭಾರತದ ಮೊಟ್ಟ ಮೊದಲ ನಾಯಕ
ಜಾಗತಿಕ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಪ್ರಾಬಲ್ಯ ಮುಂದುವರೆದಿರುವಂತೆಯೇ ಇತ್ತ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಅಪರೂಪದ ಸಾಧನೆಗೈದಿದ್ದಾರೆ.

Published On :
ಮೆಲ್ಬೋರ್ನ್: ಜಾಗತಿಕ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಪ್ರಾಬಲ್ಯ ಮುಂದುವರೆದಿರುವಂತೆಯೇ ಇತ್ತ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಅಪರೂಪದ ಸಾಧನೆಗೈದಿದ್ದಾರೆ.
ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆದ ಅಂತಿಮ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತಂಡ 2-1ರಲ್ಲಿ ಗೆದ್ದು ಕೊಂಡಿದೆ. ಆ ಮೂಲಕ ವಿರಾಟ್ ಕೊಹ್ಲಿ ಆಸಿಸ್ ನೆಲದಲ್ಲಿ ಏಕದಿನ ಸರಣಿ ಗೆದ್ದ ಭಾರತ ತಂಡದ ಮೊಟ್ಟ ಮೊದಲ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಅಲ್ಲದೆ ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನೂ ಕೂಡ ಭಾರತ ತಂಡ ಗೆದ್ದುಕೊಂಡಿತ್ತು. ಆ ಮೂಲಕ ಕೊಹ್ಲಿ ಆಸಿಸ್ ನೆಲದಲ್ಲಿ ಟೆಸ್ಟ್ ಮತ್ತು ಏಕದಿನ ಸರಣಿ ಗೆದ್ದ ಭಾರತದ ಮತ್ತು ಏಷ್ಯಾ ಖಂಡದ ಮೊದಲ ನಾಯಕ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.
ಇದಕ್ಕೂ ಮೊದಲು 2016ರಲ್ಲಿ ಆಸಿಸ್ ಪ್ರವಾಸ ಕೈಗೊಂಡಿದ್ದ ಭಾರತ ತಂಡ ಆಸಿಸ್ ತಂಡವನ್ನು ಟಿ20 ಸರಣಿಯಲ್ಲಿ ವೈಟ್ ವಾಶ್ ಮಾಡಿತ್ತು. ಅಂದು ಮಹೇಂದ್ರ ಸಿಂಗ್ ಧೋನಿ ತಂಡದ ನಾಯಕತ್ವ ವಹಿಸಿದ್ದರು. ಇದು ಈವರೆಗಿನ ಆಸಿಸ್ ನೆಲದಲ್ಲಿ ಭಾರತ ತಂಡದ ನಾಯಕನ ಗರಿಷ್ಛ ಸಾಧನೆಯಾಗಿತ್ತು. ಆದರೆ ಅದೇ ಪ್ರವಾಸದಲ್ಲೇ ಭಾರತ ತಂಡ 4-1ರಲ್ಲಿ ಏಕದಿನ ಸರಣಿ ಸೋತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತಆಸ್ಟ್ರೇಲಿಯಾAustraliaVirat Kohliವಿರಾಟ್ ಕೊಹ್ಲಿMelbourneಮೆಲ್ಬರ್ನ್Cricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


