ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ಭಾರತ, ವಿರಾಟ್ ಕೊಹ್ಲಿ
ಇತ್ತೀಚಿಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ್ದ ಭಾರತ ತಂಡ ಹಾಗೂ ನಾಯಕ...

Published On :
ದುಬೈ: ಇತ್ತೀಚಿಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ್ದ ಭಾರತ ತಂಡ ಹಾಗೂ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ.
ಐಸಿಸಿ ಸೋಮವಾರ ಟೆಸ್ಟ್ ತಂಡಗಳ ರ್ಯಾಂಕಿಂಗ್ ಅನ್ನು ಬಿಡುಗಡೆ ಮಾಡಿದ್ದು, ಭಾರತ 116 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದ್ದು, ನಾಯಕ ವಿರಾಟ್ ಕೊಹ್ಲಿ 922 ರೇಟಿಂಗ್‌ನೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಟೆಸ್ಟ್ ರ್ಯಾಂಕಿಂಗ್ ನಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ 897 ರೇಟಿಂಗ್‌ನೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಚೆತೇಶ್ವರ್ ಪೂಜಾರ್ ಅವರು 881 ರೇಟಿಂಗ್‌ನೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ರಿಷಬ್ ಪಂತ್ ಅವರು 17ನೇ ಸ್ಥಾನ ಪಡೆಯುವ ಮೂಲಕ ಟಾಪ್ 20 ಪ್ರವೇಶಿಸಿದ್ದಾರೆ.
ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ ರವೀಂದ್ರ ಜಡೇಜಾ 5ನೇ ಸ್ಥಾನದಲ್ಲಿದ್ದರೆ, ಆರ್ ಅಶ್ವಿನ್ 9ನೇ ಸ್ಥಾನ ಅಲಂಕರಿಸಿದ್ದಾರೆ. ಸೌತ್ಆಫ್ರಿಕಾದ ವೇಗಿ ಕಾಗಿಸೋ ರಬಾಡ ಮೊದಲ ಸ್ಥಾನದಲ್ಲಿದ್ದಾರೆ. ಟೆಸ್ಟ್ ಆಲ್ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ 2ನೇ ಸ್ಥಾನ ಅಲಂಕರಿಸಿದ್ದಾರೆ.
ಇನ್ನು ಟೆಸ್ಟ್ ತಂಡಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ ಮೂರನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಮೂರನೇ ಸ್ಥಾನ ಕಾಯ್ದುಕೊಳ್ಳಲು ಬುಧವಾರದಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲ್ಲುವುದು ಅನಿವಾರ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


