ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ದಾಖಲೆ ಮುರಿದ ಕೊಹ್ಲಿ; ಯಾವುದು ಆ ದಾಖಲೆ!
ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇದೀಗ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಅವರ ದಾಖಲೆಯನ್ನು...

Published On :
ನೇಪಿಯರ್: ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇದೀಗ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಅವರ ದಾಖಲೆಯನ್ನು ಸರಿಗಟ್ಟಿದ್ದು ಇನ್ನು ಟೀಂ ಇಂಡಿಯಾದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ದಾಖಲೆ ಮುಂದಿದೆ.
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 45 ರನ್ ಸಿಡಿಸಿ ಔಟಾಗಿದ್ದಾರೆ. ಒಟ್ಟಾರೆ ಏಕದಿನ ಕ್ರಿಕೆಟ್ ನಲ್ಲಿ ಕೊಹ್ಲಿ 10, 430 ರನ್ ಪೇರಿಸಿದ್ದಾರೆ. ಇನ್ನು ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ 10,405 ರನ್ ಗಳಿಸಿ ಟಾಪ್ 10 ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದರು. ಇದೀಗ ಬ್ರಿಯಾನ್ ಲಾರಾರನ್ನು ಹಿಂದಿಕ್ಕಿ ಕೊಹ್ಲಿ ಟಾಪ್ 10 ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಸಿಡಿಸಿರುವ ಟಾಪ್ 10 ಆಟಗಾರರ ಪಟ್ಟಿ:
* ಸಚಿನ್ ತೆಂಡೂಲ್ಕರ್ - 18,426 ರನ್
* ಕುಮಾರ ಸಂಗಕ್ಕಾರ - 14,234 ರನ್
* ರಿಕಿ ಪಾಂಟಿಂಗ್ - 13,704 ರನ್
* ಸನತ್ ಜಯಸೂರ್ಯ - 13,430 ರನ್
* ಮಹೇಲಾ ಜಯವರ್ಧನೆ - 12,650 ರನ್
* ಇನ್ ಜಾಮಾಮ್ ಉಲ್ ಹಕ್ - 11,739 ರನ್
* ಜಾಕ್ ಕಾಲಿಸ್ - 11,579 ರನ್
* ಸೌರವ್ ಗಂಗೂಲಿ - 11,363 ರನ್
* ರಾಹುಲ್ ದ್ರಾವಿಡ್ - 10,889 ರನ್
* ವಿರಾಟ್ ಕೊಹ್ಲಿ - 10,430 ರನ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaNew ZealandVirat Kohliವಿರಾಟ್ ಕೊಹ್ಲಿನ್ಯೂಜಿಲ್ಯಾಂಡ್Brian Laraಬ್ರಿಯಾನ್ ಲಾರಾCricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


