ಕೊಹ್ಲಿ ಬಳಿಕ ಕಿವೀಸ್ ತಂಡವನ್ನು ಬಗ್ಗುಬಡಿದ ಮಿಥಾಲಿ ರಾಜ್ ಪಡೆ!
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು ಇದರ ಬೆನ್ನಲ್ಲೇ ನ್ಯೂಜಿಲ್ಯಾಂಡ್ ಮಹಿಳಾ ತಂಡವನ್ನು ಮಿಥಾಲಿ ರಾಜ್ ಪಡೆ ಬಗ್ಗುಬಡಿದಿದೆ.

Published On :
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು ಇದರ ಬೆನ್ನಲ್ಲೇ ನ್ಯೂಜಿಲ್ಯಾಂಡ್ ಮಹಿಳಾ ತಂಡವನ್ನು ಮಿಥಾಲಿ ರಾಜ್ ಪಡೆ ಬಗ್ಗುಬಡಿದಿದೆ.
ನೇಪಿಯರ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಮಹಿಳಾ ಚಾಂಪಿಯನ್ ಶಿಪ್ ಟೂರ್ನಿಯ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲ್ಯಾಂಡ್ ಮಹಿಳಾ ತಂಡ 192 ರನ್ ಗಳಿಗೆ ಆಲೌಟ್ ಆಗಿತ್ತು. 193 ರನ್ ಗಳ ಗುರಿ ಬೆನ್ನಟ್ಟಿದ ಭಾರತ ಮಹಿಳಾ ತಂಡದ ಪರ ಸ್ಫೋಟಕ ಬ್ಯಾಟ್ಸ್ ಮನ್ ಸ್ಮೃತಿ ಮಂದಾನ(105) ಭರ್ಜರಿ ಶತಕ ಸಿಡಿಸಿದ್ದು ಪರಿಣಾಮ ಭಾರತ ತಂಡ 1 ವಿಕೆಟ್ ನಷ್ಟಕ್ಕೆ 193 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.
ನ್ಯೂಜಿಲ್ಯಾಂಡ್ ಪರ ಬ್ಯಾಟ್ಸ್ 36, ಡೇವಿನ್ 28, ಸಾಟ್ಟರ್ತ್ ವೈಟ್ 31, ಕೇರ್ 28 ರನ್ ಗಳಿಸಿದ್ದಾರೆ.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಬಿಸ್ತಾ ಮತ್ತು ಪೂನಂ ಯಾದವ್ 3, ದೀಪ್ತಿ ಶರ್ಮಾ 2 ವಿಕೆಟ್ ಪಡೆದಿದ್ದಾರೆ.
ಭಾರತ ಪರ ಬ್ಯಾಟಿಂಗ್ ನಲ್ಲಿ ರೋಡಿರ್ಗಸ್ 81 ಮತ್ತು ಸ್ಮೃತಿ ಮಂದಾನ 105 ರನ್ ಬಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaNew Zealandನ್ಯೂಜಿಲ್ಯಾಂಡ್Smriti Mandhanaಸ್ಮೃತಿ ಮಂದಾನICC Women\'s Championshipಐಸಿಸಿ ಮಹಿಳಾ ಚಾಂಪಿಯನ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


