ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆ ತತ್ಕ್ಷಣದಿಂದ ತೆರವು: ಸಿಒಎ
ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಸಿಒಎ ಆದೇಶಿಸಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ.

Published On :
ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಸಿಒಎ ಆದೇಶಿಸಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ.
ತಟಸ್ಥ ಸಲಹೆಗಾರ (ಅಮಿಕಸ್ ಕ್ಯುರಿ) ಅವರ ಸಲಹೆಯನ್ನು ಪಡೆದ ನಂತರ ಸಿಒಎ ಈ ಆದೇಶವನ್ನು ಹೊರಡಿಸಿದೆ. ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಕರಣ್ ಜೋಹರ್ ಅವರ ಟಿವಿ ಶೋನಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದ ಅವರನ್ನು ಆಕ್ಷಣವೇ ಹೊರಗಿಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ಓಂಬುಡ್ಸ್‌ಮನ್ ನ್ನೂ ನೇಮಕ ಮಾಡಿದೆ.
ಫೆ.05 ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿಕಸ್ ಕ್ಯೂರಿಯ ಪಿಎಸ್ ನರಸಿಂಹ ಅವರ ಸಲಹೆ ಪಡೆದ ಬಳಿಕ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ ಎಂದು ಸಿಒಎ ಹೇಳಿಕೆ ಬಿಡುಗಡೆ ಮಾಡಿದೆ. ಅಮಾನತು ಶಿಕ್ಷೆ ವಾಪಸ್ ಪಡೆಯಲಾಗಿರುವುದರಿಂದ ಪಾಂಡ್ಯ ಈಗ ನ್ಯೂಜಿಲ್ಯಾಂಡ್ ಸರಣಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


