2ನೇ ಏಕದಿನ ಪಂದ್ಯ: ದಶಕಗಳಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ದಾಖಲೆಯ ಜಯ!
ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ದಶಕದಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ನೆಲದಲ್ಲಿ ಭಾರತ ಗಳಿಸಿದ ದಾಖಲೆಯ ಜಯ ಇದಾಗಿದೆ.

Published On :
ನೇಪಿಯರ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ದಶಕದಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ನೆಲದಲ್ಲಿ ಭಾರತ ಗಳಿಸಿದ ದಾಖಲೆಯ ಜಯ ಇದಾಗಿದೆ.
ನೇಪಿಯರ್ ನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 325 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಕೇವಲ 234 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೊಹ್ಲಿ ಪಡೆ ಎದುರು 90 ರನ್ ಗಳ ಅಂತರದಲ್ಲಿ ಮಂಡಿಯೂರಿತು. ಈ ಮೂಲಕ ಭಾರತ ಐತಿಹಾಸಿಕ ಜಯ ಗಳಿಸಿದ್ದು, 2009 ರಲ್ಲಿ ಹ್ಯಾಮಿಲ್ಟನ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಗಳಿಸಿದ ಜಯದ ದಾಖಲೆಯನ್ನು ತಾನೇ ಸರಿಗಟ್ಟಿದೆ.
2009 ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 84 ರನ್ ಗಳ ಅಂತರದಿಂದ ಗೆಲುವು ಸಾಧಿಸಿತ್ತು (ಡಕ್ವರ್ತ್ ಲೂಯೀಸ್ ನಿಯಮ) ಈ ವರೆಗೂ ಭಾರತ ನ್ಯೂಜಿಲ್ಯಾಂಡ್ ವಿರುದ್ಧ ಗರಿಷ್ಠ ರನ್ ಗಳಿಂದ ಗೆದ್ದ ದಾಖಲೆ ಇದಾಗಿತ್ತು. 2009 ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಗೆಲುವಿನಲ್ಲಿ ವಿರೇಂದ್ರ ಸೆಹ್ವಾಗ್ ಶತಕ ಮಹತ್ವದ ಪಾತ್ರ ವಹಿಸಿತ್ತು. 90 ರನ್ ಗಳ ಅಂತರದಿಂದ ಗೆಲ್ಲುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


