ಕ್ರಿಕೆಟ್

ಸಚಿನ್​, ಅಫ್ರಿದಿ ದಾಖಲೆ ಮುರಿದ ನೇಪಾಳದ ರೋಹಿತ್, ಅರ್ಧ ಶತಕ ಬಾರಿಸಿದ ವಿಶ್ವದ ಕಿರಿಯ ಆಟಗಾರ

ಕ್ರಿಕೆಟ್ ದೇವರು ಎಂದೇ ಖ್ಯಾತಿ ಪಡೆದಿರುವ ಸಚಿನ್ ತೆಂಡೂಲ್ಕರ್ ಹಾಗೂ ಪಾಕಿಸ್ತಾನ ಶಾಹಿದ್ ಅಫ್ರಿದಿ ಅವರ ದಾಖಲೆ ಮುರಿದ ನೇಪಾಳದ 16 ವರ್ಷದ ಯುವ...

ಸಚಿನ್​, ಅಫ್ರಿದಿ ದಾಖಲೆ ಮುರಿದ ನೇಪಾಳದ ರೋಹಿತ್, ಅರ್ಧ ಶತಕ ಬಾರಿಸಿದ ವಿಶ್ವದ ಕಿರಿಯ ಆಟಗಾರ
ರೋಹಿತ್ ಪಡಿಲ್
Published On :
ದುಬೈ: ಕ್ರಿಕೆಟ್ ದೇವರು ಎಂದೇ ಖ್ಯಾತಿ ಪಡೆದಿರುವ ಸಚಿನ್ ತೆಂಡೂಲ್ಕರ್ ಹಾಗೂ ಪಾಕಿಸ್ತಾನ ಶಾಹಿದ್ ಅಫ್ರಿದಿ ಅವರ ದಾಖಲೆ ಮುರಿದ ನೇಪಾಳದ 16 ವರ್ಷದ ಯುವ ಆಟಗಾರ ರೋಹಿತ್​ ಪಡಿಲ್, ಶನಿವಾರ​ ಯುಎಇ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿದ ವಿಶ್ವದ ಅತ್ಯಂತ ಕಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಇಂದು ಯುಎಇ ವಿರುದ್ದ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ​ಗೆ ಇಳಿದ ರೋಹಿತ್ 55 ರನ್ ​ಗಳಿಸಿ ತಂಡಕ್ಕೆ ನೆರವಾದರು.
ಈ ಅರ್ಧಶತಕದ ಮೂಲಕ ರೋಹಿತ್​ ಭಾರತದ ಬ್ಯಾಟಿಂಗ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಹಾಗೂ ಪಾಕಿಸ್ತಾನದ ಶಾಹಿದ್​ ಅಫ್ರಿದಿಯವರನ್ನು ಹಿಂದಿಕ್ಕಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅರ್ಧಶತಕ  ಸಿಡಿಸಿದ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಹಿಂದೆ ಸಚಿನ್ ಮೊದಲ ಅರ್ಧಶತಕ(ಟೆಸ್ಟ್​​ ಕ್ರಿಕೆಟ್​) ಸಿಡಿಸಿದಾಗ ಅವರ ವಯಸ್ಸು​ 16 ವರ್ಷ ಹಾಗೂ 213 ದಿನಗಳಾಗಿತ್ತು. ಇನ್ನು ಅಫ್ರಿದಿ( ಏಕದಿನ ಕ್ರಿಕೆಟ್​) 16 ವರ್ಷ 217 ದಿನಗಳಲ್ಲಿ ಈ ಸಾಧನೆ ಮಾಡಿದ್ದರು. ರೋಹಿತ್​ ಪಡೀಲ್​ 16 ವರ್ಷ 146 ದಿನಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ.
ಇದಕ್ಕೂ ಮೊದಲು 15 ವರ್ಷ 335 ದಿನಗಳು ಆಗಿರುವಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟ 4 ನೇ ಕಿರಿಯ ಆಟಗಾರ ಎಂಬ ದಾಖಲೆಗೂ ರೋಹಿತ್​ ಪಾತ್ರರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.