45 ವರ್ಷಗಳ ಬಳಿಕ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಪಡೆದ ಕೆರಿಬಿಯನ್!
ಬರೋಬ್ಬರಿ 45 ವರ್ಷಗಳ ಬಳಿಕ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ವೆಸ್ಟ್ ಇಂಡೀಸ್ ಆಟಗಾರನೊಬ್ಬ ನಂಬರ್ 1 ಸ್ಥಾನ ಪಡೆದಿದ್ದಾರೆ.

Published On :
ದುಬೈ: ಬರೋಬ್ಬರಿ 45 ವರ್ಷಗಳ ಬಳಿಕ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ವೆಸ್ಟ್ ಇಂಡೀಸ್ ಆಟಗಾರನೊಬ್ಬ ನಂಬರ್ 1 ಸ್ಥಾನ ಪಡೆದಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಜಾಸನ್ ಹೋಲ್ಡರ್ ಆಕರ್ಷಕ ದ್ವಿಶತಕ ಸಿಡಿಸುವ ಜತೆಗೆ 2 ವಿಕೆಟ್ ಪಡೆದುಕೊಂಡು ಮಿಂಚಿದ್ದರು .ಈ ಪ್ರದರ್ಶನದಿಂದ 440 ಅಂಕ ಸಂಪಾದಿಸಿರುವ ಅವರು ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ನಂಬರ್ 1 ಆಲ್ ರೌಂಡರ್ ಆಗಿ ಹೊರಹೊಮ್ಮಿದ್ದಾರೆ.
ಇನ್ನು ಕಳೆದ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕ್ರಿಕೆಟಿಗನೋರ್ವ ಐಸಿಸಿ ಟೆಸ್ಟ್ ಶ್ರೇಯಾಂಕದ ಆಲ್ ರೌಂಡರ್ ವಿಭಾಗದಲ್ಲಿ ನಂಬರ್ 1 ಸ್ಥಾನ ಅಲಂಕರಿಸಿರುವ ಮಹತ್ವದ ಸಾಧನೆ ಮಾಡಿದ್ದಾರೆ. 1974ರಲ್ಲಿ ವೆಸ್ಟ್ ಇಂಡೀಸ್ ನ ಗಾರ್ಫಿಲ್ಡ್ ಸೊಬರ್ಸ್ ಈ ಶ್ರೇಯಾಂಕ ಪಡೆದುಕೊಂಡಿದ್ದರು.
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಕಿಗಾಸೋ ರಬಾಡ ನಂಬರ್ 1 ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Virat Kohliವಿರಾಟ್ ಕೊಹ್ಲಿICC rankingWest indiesವೆಸ್ಟ್ ಇಂಡೀಸ್ಐಸಿಸಿ ರ್ಯಾಂಕಿಂಗ್Jason Holderಜಾಸನ್ ಹೋಲ್ಡರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


