ಕ್ರಿಕೆಟ್

ಯುವರ್ ಇಂಗ್ಲೀಷ್ ಬಹುತ್ ಅಚ್ಚಾ; ಶಮಿಯನ್ನು ಶ್ಲಾಘಿಸಿದ ಸೈಮನ್, ನಗು ಬರಿಸುತ್ತೆ ವಿಡಿಯೋ!

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು ಇನ್ನು ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಯುವರ್ ಇಂಗ್ಲೀಷ್ ಬಹುತ್ ಅಚ್ಚಾ; ಶಮಿಯನ್ನು ಶ್ಲಾಘಿಸಿದ ಸೈಮನ್, ನಗು ಬರಿಸುತ್ತೆ ವಿಡಿಯೋ!
ಸೈಮನ್ ಡೌಲ್, ಮೊಹಮ್ಮದ್ ಶಮಿ, ವಿರಾಟ್ ಕೊಹ್ಲಿ
Published On :
ಬೇ ಓವಲ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು ಇನ್ನು ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಅತ್ಯುತ್ತಮ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು ಪ್ರಶಸ್ತಿ ಸ್ವೀಕರಿಸಿದ ಬಳಿಕ ಶಮಿ ಮಾತಿಗೆ ನ್ಯೂಜಿಲ್ಯಾಂಡ್ ಮಾಜಿ ಕ್ರಿಕೆಟಿಗ ಸೈಮನ್ ಡೌಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
ಮೂರು ವಿಕೆಟ್ ಪಡೆದಿದ್ದ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಸೈಮನ್ ಡೌಲ್ ಪ್ರಶ್ನೆಗೆ ಉತ್ತರಿಸಿದರು. ಇಂಗ್ಲೀಷ್ ನಲ್ಲಿ ಉತ್ತರ ನೀಡಿದ ಶಮಿಗೆ ಡೌಲ್ ಹಿಂದಿಯಲ್ಲಿ ಯುವರ್ ಇಂಗ್ಲಿಷ್ ಬಹುತ್ ಅಚ್ಚಾ ಹೈ ಎಂದರು. ಇದು ಶಮಿ ಹಾಗೂ ವಿರಾಟ್ ಕೊಹ್ಲಿ ನಗು ತರಿಸಿತು. ಈ ವಿಡಿಯೋ ಸದ್ಯ ವೈರಲ್ ಆಗಿದೆ. 
ನ್ಯೂಜಿಲ್ಯಾಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಸರಣಿಯನ್ನ ಕೈವಶ ಮಾಡಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.