ಕ್ರಿಕೆಟ್

ವಿಶ್ವಕಪ್ ಇತಿಹಾಸದಲ್ಲಿ ಈ ವಿಶಿಷ್ಠ ದಾಖಲೆ ನಿರ್ಮಿಸಿದ 2ನೇ ಆಟಗಾರ ಕೊಹ್ಲಿ!

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ನಿನ್ನೆ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ವಿಶ್ವಕಪ್ ಇತಿಹಾಸದಲ್ಲೇ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.

ವಿಶ್ವಕಪ್ ಇತಿಹಾಸದಲ್ಲಿ ಈ ವಿಶಿಷ್ಠ ದಾಖಲೆ ನಿರ್ಮಿಸಿದ 2ನೇ ಆಟಗಾರ ಕೊಹ್ಲಿ!
ಸಂಗ್ರಹ ಚಿತ್ರ
Published On :
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ನಿನ್ನೆ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ವಿಶ್ವಕಪ್ ಇತಿಹಾಸದಲ್ಲೇ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.
ಎಡ್ಜ್ ಬಾಸ್ಟನ್‌ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 31 ರನ್‌ಗಳಿಂದ ಸೋಲು ಅನುಭವಿಸಿದರೂ ಟೀಮ್‌ ಇಂಡಿಯಾ ನಾಯಕ ಅರ್ಧ ಶತಕ ಸಿಡಿಸುವ ಮೂಲಕ ವಿಶ್ವ ಕ್ರಿಕೆಟ್ ನಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಭಾನುವಾರದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ 76 ಎಸೆತಗಳಲ್ಲಿ 66 ರನ್‌ ಗಳಿಸಿದರು. ಆ ಮೂಲಕ ಐಸಿಸಿ ವಿಶ್ವಕಪ್‌ ಪ್ರಸಕ್ತ ಆವೃತ್ತಿಯಲ್ಲಿ ಸತತ ಐದು ಅರ್ಧ ಶತಕ ಪೂರೈಸಿದರು. ವಿಶ್ವಕಪ್ ಇತಿಹಾಸದಲ್ಲಿ ಸತತ ಐದು ಅರ್ಧ ಶತಕ ಸಿಡಿಸಿದ ವಿಶ್ವದ ಎರಡನೇ ಬ್ಯಾಟ್ಸ್ ಮನ್‌ ಎಂಬ ಸಾಧನೆಯನ್ನು ರನ್‌ ಮಿಷನ್‌ ಕೊಹ್ಲಿ ಮಾಡಿದರು. 2015ರ ವಿಶ್ವಕಪ್‌ ನಲ್ಲಿ ಆಸ್ಟ್ರೇಲಿಯಾ ತಂಡದ ಸ್ಟೀವ್‌ ಸ್ಮಿತ್‌ ಸತತ ಐದು ಅರ್ಧ ಶತಕ ಸಿಡಿಸಿ ಮೊದಲ ಸ್ಥಾನದಲ್ಲಿದ್ದಾರೆ.
ಅಲ್ಲದೇ, ಇಂಗ್ಲೆಂಡ್‌ ವಿರುದ್ಧ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್‌ ಎಂಬ ಸಾಧನೆಯನ್ನು ವಿರಾಟ್ ಕೊಹ್ಲಿ ಮಾಡಿದರು. ಆ ಮೂಲಕ ಭಾರತ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅವರನ್ನು ಹಿಂದಿಕ್ಕಿದರು. ರಾಹುಲ್ ದ್ರಾವಿಡ್‌ ಇಂಗ್ಲೆಂಡ್‌ ವಿರುದ್ಧ 1,238 ರನ್‌ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.