ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲು: ಎಂಎಸ್ ಧೋನಿ ವಿರುದ್ಧ ಮುಗಿಬಿದ್ದ ನೆಟಿಗರು!
ವಿಶ್ವಕಪ್ ನಲ್ಲಿ ಅಜೇಯ ಓಟ ಮುಂದುವರೆಸಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ 31 ರನ್ ಗಳಿಂ ಸೋಲು ಕಂಡಿದ್ದು ಇದಕ್ಕೆ ಆಕ್ರೋಶಗೊಂಡಿರುವ ನೆಟಿಗರು ಎಂಎಸ್ ಧೋನಿ ವಿರುದ್ಧ ಹರಿಹಾಯ್ದಿದ್ದಾರೆ.

Published On :
ಬರ್ಮಿಂಗ್ ಹ್ಯಾಮ್: ವಿಶ್ವಕಪ್ ನಲ್ಲಿ ಅಜೇಯ ಓಟ ಮುಂದುವರೆಸಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ 31 ರನ್ ಗಳಿಂ ಸೋಲು ಕಂಡಿದ್ದು ಇದಕ್ಕೆ ಆಕ್ರೋಶಗೊಂಡಿರುವ ನೆಟಿಗರು ಎಂಎಸ್ ಧೋನಿ ವಿರುದ್ಧ ಹರಿಹಾಯ್ದಿದ್ದಾರೆ.
ಕೊನೆಯಲ್ಲಿ ಓವರ್ ಗೆ ಹತ್ತು ರನ್ ಬೇಕಿದ್ದಾಗಲು ಎಂಎಸ್ ಧೋನಿ ಅವರು ಸಿಂಗಲ್ಸ್ ಗಳನ್ನು ತೆಗೆದುಕೊಳ್ಳುತ್ತಿದ್ದರು. ಇದರಿಂದ ಪಂದ್ಯಕ್ಕೆ ಹಿನ್ನಡೆಯಾಯಿತು. ಅಂತಿಮ ಓವರ್ ಗಳಲ್ಲಿ ಮೈ ಚಳಿ ಬಿಟ್ಟು ಬ್ಯಾಟ್ ಬೀಸಿದ್ದರೆ ಗೆಲುವು ಸಾಧ್ಯವಾಗಿರುತ್ತಿತ್ತು. ಆದರೆ ಧೋನಿ ಮಾತ್ರ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದಾರೆ ಎಂದು ನೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂಡೆದೆ ಕೇದಾರ್ ಜಾಧವ್ ಸಹ ಭರ್ಜರಿ ಹೊಡೆತಕ್ಕೆ ಮುಂದಾಗದ್ದಕ್ಕೆ ಕಿಡಿಕಾರಿರುವ ನೆಟಿಗರು ಎಂಎಸ್ ಧೋನಿ ಮತ್ತು ಕೇದಾರ್ ಜಾದವ್ ಇಬ್ಬರು ಗೆಲುವಿನ ಪ್ರಯತ್ನವನ್ನೇ ಮಾಡಲಿಲ್ಲ ಎಂದು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಇನ್ನು ಕೆಲವರು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಯಾಕೆ ಇನ್ನೂ ಧೋನಿಯನ್ನು ತಲೆ ಮೇಲೆ ಹೊತ್ತು ತಿರುಗುತ್ತಿದ್ದಾರೋ ಎಂದು ಆಕ್ರೋಶ ಹೊರಹಾಕಿದ್ದಾರೆ.
If there was any team that had the ability to stop India’s winning run. It was England. Dhoni’s approach in the last few overs however was baffling.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿMS Dhoniಎಂಎಸ್ ಧೋನಿCricket Offbeatಕ್ರಿಕೆಟ್ ಸ್ವಾರಸ್ಯWorld Cup 2019ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


