ಐಸಿಸಿ ವಿಶ್ವಕಪ್ 2019: ರೋ'ಹಿಟ್' ಶರ್ಮಾ ಆರ್ಭಟಕ್ಕೆ ಧೋನಿ ದಾಖಲೆಯೂ ಪತನ!
ಐಸಿಸಿ ವಿಶ್ವಕಪ್ ಕ್ರಿಕೆಟ್ ನ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಶತಕ ಸಿಡಿಸಿದ ಭಾರತದ ರೋಹಿತ್ ಶರ್ಮಾ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಭಾರತ ತಂಡದ ಮಿಸ್ಟರ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನೂ ಪತನಗೊಳಿಸಿದ್ದಾರೆ.

Published On :
ಲಂಡನ್: ಐಸಿಸಿ ವಿಶ್ವಕಪ್ ಕ್ರಿಕೆಟ್ ನ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಶತಕ ಸಿಡಿಸಿದ ಭಾರತದ ರೋಹಿತ್ ಶರ್ಮಾ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಭಾರತ ತಂಡದ ಮಿಸ್ಟರ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನೂ ಪತನಗೊಳಿಸಿದ್ದಾರೆ.
ಹೌದು.. ಇಂದು ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಅಮೋಘ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ, 92 ಎಸೆತಗಳಲ್ಲಿ ರೋಹಿತ್ ಶರ್ಮಾ 104ರನ್ ಗಳನ್ನು ಸಿಡಿಸಿದರು. ಅವರ ಈ ಅಮೋಘ ಇನ್ನಿಂಗ್ಸ್ ನಲ್ಲಿ 7 ಬೌಂಡರಿಗಳು ಮತ್ತು 5 ಅದ್ಭುತ ಸಿಕ್ಸರ್ ಗಳಿದ್ದವು. ತಮ್ಮ ಭರ್ಜರಿ ಶತಕದ ಮೂಲಕ ರೋಹಿತ್ ಶರ್ಮಾ ಶ್ರೀಲಂಕಾದ ಲೆಜೆಂಡ್ ಆಟಗಾರ ಕುಮಾರ ಸಂಗಕ್ಕಾರ ಅವರ ದಾಖಲೆ ಮುರಿದರು. ಒಂದೇ ವಿಶ್ವಕಪ್ ನಲ್ಲಿ ನಾಲ್ಕು ಶತಕ ಬಾರಿಸಿ, ಶ್ರೀಲಂಕಾದ ಕುಮಾರ್ ಸಂಗಕ್ಕಾರ ಅವರ ದಾಖಲೆ ಸಮಕ್ಕೆ ನಿಂತ ಮುಂಬೈಕರ್, ಮತ್ತೊಂದು ದಾಖಲೆ ಬರೆದಿದ್ದಾರೆ.
ಅಂತೆಯೇ ಶತಕ ಮಾತ್ರವಲ್ಲದೇ ಸಿಕ್ಸರ್ ಗಳ ಮೂಲಕವೂ ರೋಹಿತ್ ಶರ್ಮಾ ದಾಖಲೆ ನಿರ್ಮಾಣ ಮಾಡಿದ್ದು, ಬಾಂಗ್ಲಾದೇಶದ ವಿರುದ್ಧ ಐದು ಸಿಕ್ಸರ್ ಸಿಡಿಸಿದ ರೋಹಿತ್ ಶರ್ಮಾ, ಏಕದಿನ ಕ್ರಿಕೆಟ್ ನಲ್ಲಿ ಭಾರತದ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಭಾರತದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಬಾಂಗ್ಲಾದೇಶದ ವಿರುದ್ಧದ ಐದು ಸಿಕ್ಸರ್ ಗಳೂ ಸೇರಿದಂತೆ ರೋಹಿತ್ ಶರ್ಮಾ ಏಕದಿನದಲ್ಲಿ ತಮ್ಮ ಸಿಕ್ಸರ್ ಗಳ ಸಂಖ್ಯೆಯನ್ನು 230ಕ್ಕೆ ಏರಿಸಿಕೊಂಡಿದ್ದು, ಆ ಮೂಲಕ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ಭಾರತದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂತೆಯೇ ಈ ದಾಖಲೆ ನಿರ್ಮಿಸಿದ್ದ ಧೋನಿ ಅವರನ್ನು ರೋಹಿತ್ ಹಿಂದಿಕ್ಕಿದ್ದಾರೆ. ಧೋನಿ ಏಕದಿನದಲ್ಲಿ 228 ಸಿಕ್ಸರ್ ಗಳನ್ನು ಸಿಡಿಸಿದ್ದು, ಮೂರನೇ ಸ್ಥಾನದಲ್ಲಿ ಸಚಿನ್ ತೆಂಡೂಲ್ಕರ್ (195) ಇದ್ದು, ನಾಲ್ಕನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ (190) ಇದ್ದಾರೆ.
ಇನ್ನು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಮೊದಲ ಸ್ಥಾನದಲ್ಲಿದ್ದು, ಅಫ್ರಿದಿ ಒಟ್ಟು 351 ಸಿಕ್ಸರ್ ಸಿಡಿಸಿದ್ದಾರೆ. ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಯ್ಲ್ 2ನೇ ಸ್ಥಾನದಲ್ಲಿದ್ದು, ಗೇಯ್ಲ್ ಒಟ್ಟು 326 ಸಿಕ್ಸರ್ ಸಿಡಿಸಿದ್ದಾರೆ. ಶ್ರೀಲಂಕಾದ ಮಾಜಿ ಆಟಗಾರ ಸನತ್ ಜಯಸೂರ್ಯ ಒಟ್ಟು 270 ಸಿಕ್ಸರ್ ಸಿಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್Londonಲಂಡನ್indiaಭಾರತRohit Sharmaರೋಹಿತ್ ಶರ್ಮಾಬಾಂಗ್ಲಾದೇಶBangladeshCricket OffbeatICC World Cup 2019ಐಸಿಸಿ ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


