ಐಸಿಸಿ ವಿಶ್ವಕಪ್ 2019: ಸತತ 6ನೇ ಬಾರಿಗೆ ಸೆಮೀಸ್ ಗೆ ಭಾರತ ಲಗ್ಗೆ, ದಾಖಲೆ!
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ 28 ರನ್ ಗಳ ಅಂತರದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿದ ಭಾರತ ತಂಡ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದ್ದು, ಆ ಮೂಲಕ ವಿಶೇಷ ದಾಖಲೆಯೊಂದನ್ನು ನಿರ್ಮಾಣ ಮಾಡಿದೆ.

Published On :
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ 28 ರನ್ ಗಳ ಅಂತರದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿದ ಭಾರತ ತಂಡ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದ್ದು, ಆ ಮೂಲಕ ವಿಶೇಷ ದಾಖಲೆಯೊಂದನ್ನು ನಿರ್ಮಾಣ ಮಾಡಿದೆ.
ಹೌದು.. ಇಂದು ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ 28 ರನ್ ಗಳ ಅಂತರದ ಜಯ ದಾಖಲಿಸಿದ್ದು, ಆ ಮೂಲಕ ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಅಂತೆಯೇ ಹಾಲಿ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಬಳಿಕ ಸೆಮಿ ಫೈನಲ್ ಗೆ ಬಂದ 2ನೇ ತಂಡವಾಗಿದೆ.
ಸೆಮೀಸ್ ಗೆ ಭಾರತ ದಾಖಲೆ ನಿರ್ಮಾಣ
ಇನ್ನು ಹಾಲಿ ಐಸಿಸಿ ಟೂರ್ನಿಯಲ್ಲೂ ಭಾರತ ತಂಡ ಸೆಮಿ ಫೈನಲ್ ಹಂತಕ್ಕೇರುವ ಮೂಲಕ ವಿಶೇಷ ದಾಖಲೆ ನಿರ್ಮಾಣ ಮಾಡಿದ್ದು, ಐಸಿಸಿಯ ಟೂರ್ನಿಗಳಲ್ಲಿ ಸತತ ಆರನೇ ಬಾರಿಗೆ ಸೆಮೀಸ್ ಗೆ ಬಂದ ತಂಡ ಎಂಬ ದಾಖಲೆಯನ್ನು ಭಾರತ ನಿರ್ಮಾಣ ಮಾಡಿದೆ. ಈ ಹಿಂದೆ 2013ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ, 2014ರ ಟಿ20 ವಿಶ್ವಕಪ್, 2015ರ ವಿಶ್ವಕಪ್, 2016ರ ಟಿ20 ವಿಶ್ವಕಪ್, 2017ರ ಚಾಂಪಿಯನ್ಸ್ ಟ್ರೋಫಿ ಮತ್ತು ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೆಮೀಸ್ ಗೆ ಲಗ್ಗೆ ಇಟ್ಟಿದೆ. ಇದು ಭಾರತದ ಸತತ 6ನೇ ಸೆಮಿ ಫೈನಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್Londonಲಂಡನ್indiaಭಾರತಬಾಂಗ್ಲಾದೇಶBangladeshCricket OffbeatICC World Cup 2019ಐಸಿಸಿ ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


