ಐಸಿಸಿ ವಿಶ್ವಕಪ್ 2019: ಬಾಂಗ್ಲಾ ಬಗ್ಗು ಬಡಿದ ಭಾರತ ಸೆಮೀಸ್ ಗೆ ಲಗ್ಗೆ!
ತೀವ್ರ ಕುತೂಹಲ ಕೆರಳಿಸಿದ್ದ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದ್ದು, ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.

Published On :
ಲಂಡನ್: ತೀವ್ರ ಕುತೂಹಲ ಕೆರಳಿಸಿದ್ದ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದ್ದು, ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಭಾರತ ನೀಡಿದ 315 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ 48 ಓವರ್ ಗಳಲ್ಲಿ 286 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ ಭಾರತದ ಎದುರು 28 ರನ್ ಗಳ ಅಂತರದಲ್ಲಿ ಮಂಡಿಯೂರಿತು.
ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ರೋಹಿತ್ ಶರ್ಮಾ (104 ರನ್) ಹಾಗೂ ಕೆಎಲ್ ರಾಹುಲ್ (77ರನ್) ಅದ್ಭುತ ಆರಂಭ ಒದಗಿಸಿದರು. ಬಳಿಕ ಕೊಹ್ಲಿ (26 ರನ್) ಜೊತೆಗೂಡಿದ ರಿಷಬ್ ಪಂತ್ (48 ರನ್) ಭರ್ಜರಿ ಆಟವಾಡಿದರೂ, ಕೇವಲ 2 ರನ್ ಗಳ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು. ಬಳಿಕ ಅಂತಿಮ ಹಂತದಲ್ಲಿ ಮಹೇಂದ್ರ ಸಿಂಗ್ (35 ರನ್) ತಂಡದ ಮೊತ್ತವನ್ನು 300ರ ಗಡಿ ದಾಟಿದರು. ಅಂತಿಮವಾಗಿ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 314ರನ್ ಗಳಿಸಿತು.
315 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ ಆರಂಭದಿಂದಲೇ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಹೋಯಿತು. 22 ರನ್ ಗಳಿಸಿದ್ದ ತಮೀಮ್ ಇಕ್ಬಾಲ್ ಶಮಿಗೆ ವಿಕೆಟ್ ಒಪ್ಪಿಸಿದರೆ, 33 ರನ್ ಗಳಿಸಿದ್ದ ಸೌಮ್ಯ ಸರ್ಕಾರ್ ಹಾರ್ದಿಕ್ ಪಾಂಡ್ಯಗೆ ಬಲಿಯಾದರು. ಬಳಿಕ ಬಂದ ಶಕೀಬ್ ಅಲ್ ಹಸನ್ ಅಕ್ಷರಶಃ ಭಾರತೀಯ ಬೌಲರ್ ಗಳನ್ನು ಕಾಡಿದರು. 74 ಎಸೆತಗಳನ್ನು ಎದುರಿಸಿದ ಶಕೀಬ್ 66ರನ್ ಗಳಿಸಿ ಭಾರತದ ಪಾಳಯದಲ್ಲಿ ಆಂತಕ ಮೂಡಿಸಿದರು. ಆದರೆ 34ನೇ ಓವರ್ ನಲ್ಲಿ ಹಾರ್ದಿಕ್ ಪಾಂಡ್ಯಾ ಬೌಲಿಂಗ್ ನಲ್ಲಿ ಶಕೀಬ್ ಔಟಾಗುವ ಮೂಲಕ ಬಾಂಗ್ಲಾ ಪಾಳಯದಲ್ಲಿ ಆಂತಕಕ್ಕೆ ಕಾರಣರಾದರು.
ಆದರೂ ಪಟ್ಟು ಬಿಡದ ಬಾಂಗ್ಲಾದೇಶದ ಬಾಲಂಗೋಚಿ ಬ್ಯಾಟ್ಸಮನ್ ಗಳು ಎಲ್ಲಿಯೂ ಕೂಡ ತಂಡದ ರನ್ ರೇಟ್ ಕುಸಿಯದಂತೆ ನೋಡಿಕೊಂಡರು. ಸಬ್ಬೀರ್ ರೆಹಮಾನ್ (36 ರನ್) ಮತ್ತು ಮಹಮದ್ ಸೈಫುದ್ದೀನ್ ಕೊನೆಯವರೆಗೂ ಕ್ರೀಸ್ ನಲ್ಲಿ ನಿಂತು ಬಾಂಗ್ಲಾ ಗೆಲುವಿಗೆ ಹೋರಾಡಿದರು. ಆದರೆ 48ನೇ ಓವರ್ ಎಸೆದ ಭಾರತದ ಜಸ್ ಪ್ರೀತ್ ಬುಮ್ರಾ, ರುಬೆಲ್ ಹುಸೇನ್ ಮತ್ತು ಮುಸ್ತಫಿಜುರ್ ರೆಹಮಾನ್ ರನ್ನು ಔಟ್ ಮಾಡುವ ಮೂಲಕ ಬಾಂಗ್ಲಾ ಸೋಲಿಗೆ ಕಾರಣರಾದರು.
ಸೈಫುದ್ದೀನ್ 51ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನು ಭಾರತದ ಪರ ಹಾರ್ದಿಕ್ ಪಾಂಡ್ಯಾ 3 ಮತ್ತು ಜಸ್ ಪ್ರೀತ್ ಬುಮ್ರಾ 4 ವಿಕೆಟ್ ಕಬಳಿಸಿದರೆ, ಭುವನೇಶ್ವರ್ ಕುಮಾರ್, ಮಹಮದ್ ಶಮಿ ಮತ್ತು ಯಜುವೇಂದ್ರ ಚಹಲ್ ತಲಾ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


