ಐಸಿಸಿ ವಿಶ್ವಕಪ್ 2019: ವಿಂಡೀಸ್ ವಿರುದ್ಧ ಲಂಕಾಗೆ 23 ರನ್ ಗಳ ಭರ್ಜರಿ ಜಯ
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 23 ರನ್ ಗಳ ಸೋಲು ಕಂಡಿದೆ.

Published On :
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 23 ರನ್ ಗಳ ಸೋಲು ಕಂಡಿದೆ.
ಚಸ್ಟರ್ ಲೀ ಸ್ಟ್ರೀಟ್ ಕ್ರೀಡಾಂಗಣದಲ್ಲಿ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ವೆಸ್ಟ್ ಇಂಡೀಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ 339 ರನ್ ಗಳ ಬೃಹತ್ ಗುರಿ ನೀಡಿತು. ಲಂಕಾ ಪರ ಅವಿಷ್ಕಾ ಫರ್ನಾಂಡೋ 104 ರನ್ ಹಾಗೂ ಕುಶಾಲ್ ಪೆರೆರಾ (64 ರನ್) ಅವರ ಅಮೋಘ ಬ್ಯಾಟಿಂಗ್ ನೆರವಿನಿಂದಾಗಿ ಲಂಕಾ ತಂಡ ಬೃಹತ್ ಪೇರಿಸಿತು.
ಲಂಕಾ ನೀಡಿದ 339 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ವೆಸ್ಟ್ ಇಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ವಿಂಡೀಸ್ ಪರ ನಿಕೋಲಸ್ ಪೂರನ್ (118ರನ್), ಫಬಿಯಾನ್ ಅಲ್ಲೆನ್ 51 ರನ್ ಗಳಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದರಾದರೂ, ಕೆಳ ಕ್ರಮಾಂಕದ ದಿಢೀರ್ ವಿಕೆಟ್ ಪತನ ವಿಂಡೀಸ್ ಸೋಲಿಗೆ ಕಾರಣವಾಯಿತು. ಅಂತಿಮವಾಗಿ ವಿಂಡೀಸ್ ತಂಡ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿ 23 ರನ್ ಗಳ ಅಂತರದಲ್ಲಿ ಸೋಲು ಕಂಡಿತು.
Sri Lanka beat Windies by 23 runs!
— Sri Lanka Cricket
WI 315/9 (Nicholas Pooran 118, Fabian Allen 51 : Lasith Malinga 3/55) v SL 338/6. #LionsRoar #WeRoar #SLvWI #CWC19 pic.twitter.com/QzgJ98i9hw
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್Londonಲಂಡನ್ಶ್ರೀಲಂಕಾSrilankaWest indiesವೆಸ್ಟ್ ಇಂಡೀಸ್Cricket OffbeatICC World Cup 2019ಐಸಿಸಿ ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


