ಸಂಘಟಿತ ಆಟಕ್ಕೆ ಸಿಕ್ಕ ಗೆಲುವು: ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್
ತಂಡದ ಸಂಘಟಿತ ಹೋರಾಟವೇ ನ್ಯೂಜಿಲೆಂಡ್ ವಿರುದ್ಧದ ಭರ್ಜರಿ ಗೆಲುವಿಗೆ ಕಾರಣ ಎಂದು ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಹೇಳಿದ್ದಾರೆ.

Published On :
ಲಂಡನ್: ತಂಡದ ಸಂಘಟಿತ ಹೋರಾಟವೇ ನ್ಯೂಜಿಲೆಂಡ್ ವಿರುದ್ಧದ ಭರ್ಜರಿ ಗೆಲುವಿಗೆ ಕಾರಣ ಎಂದು ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಹೇಳಿದ್ದಾರೆ.
ಇಂದು ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 119ರನ್ ಗಳ ಅಂತರದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿತು. ಪಂದ್. ಮುಕ್ತಾಯದ ಬಳಿಕ ಮಾತನಾಡಿದ ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್, ನ್ಯೂಜಿಲೆಂಡ್ ವಿರುದ್ಧ ಆಕ್ರಮಣಕಾರಿ ಹಾಗೂ ಸಂಘಟಿತ ಆಟದ ಫಲವಾಗಿ ತಂಡ ಗೆಲುವು ಸಾಧಿಸುವಲ್ಲಿ ಸಾಧ್ಯವಾಯಿತು ಎಂದು ಹೇಳಿದ್ದಾರೆ.
'ಇಂದು ತಂಡ ಭರ್ಜರಿ ಪ್ರದರ್ಶನ ನೀಡಿದೆ. ಜೇಸನ್ ರಾಯ್ ಹಾಗೂ ಬೇರ್ ಸ್ಟೋ ತಂಡಕ್ಕೆ ಉತ್ತಮ ಆರಂಭ ನೀಡಿದರು. 25 ಓವರ್ ನ ಬಳಿಕ ಪಿಚ್ ವರ್ತನೆ ಬದಲಾಯಿತು. ಬ್ಯಾಟ್ಸ್ ಮನ್ ಗಳು ರನ್ ಬಾರಿಸಲು ಶ್ರಮಿಸಿದರು. ಆದರೂ, ಇಂಗ್ಲೆಂಡ್ ಸವಾಲಿನ ಮೊತ್ತ ಕಲೆ ಹಾಕುವಲ್ಲಿ ಸಫಲವಾಯಿತು. ನಾವು ಮೊದಲು ಬ್ಯಾಟಿಂಗ್ ಮಾಡುವ ನಿರ್ಣಯ ಉತ್ತಮವಾಗಿ ಇತ್ತು. ಎರಡನೇ ಇನ್ನಿಂಗ್ಸ್ ಬ್ಯಾಟ್ ಮಾಡುವಾಗ ಪಿಚ್ ಕೊಂಚ ಬೌಲರ್ ಗಳಿಗೆ ನೆರವು ನೀಡುವುದನ್ನು ಮನಗೊಂಡು ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ಮಾರ್ಗನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Londonಲಂಡನ್ಭಾರತನ್ಯೂಜಿಲೆಂಡ್ಇಂಗ್ಲೆಂಡ್EnglandICC World Cup 2019ಐಸಿಸಿ ವಿಶ್ವಕಪ್ 2019New Zealnad
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


