ಸೆಮಿ ಫೈನಲ್ ಗೂ ಮುನ್ನವೇ ಆಸಿಸ್ ಗೆ ಭಾರಿ ಆಘಾತ, ಗಾಯಗೊಂಡ ಸ್ಫೋಟಕ ಬ್ಯಾಟ್ಸ್ ಮನ್ ಟೂರ್ನಿಯಿಂದ ಔಟ್!
ಹಾಲಿ ಐಸಿಸಿ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಸೆಮಿ ಫೈನಲ್ ಕದನಕ್ಕೆ ಸಿದ್ಧವಾಗಿರುವ ಪ್ರಬಲ ಆಸ್ಚ್ರೇಲಿಯಾ ತಂಡಕ್ಕೆ ಸೆಮೀಸ್ ಕದನಕ್ಕೂ ಮೊದಲೇ ಭಾರಿ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಸ್ಫೋಟಕ ಬ್ಯಾಟ್ಸ್ ಮನ್ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

Published On :
ಲಂಡನ್: ಹಾಲಿ ಐಸಿಸಿ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಸೆಮಿ ಫೈನಲ್ ಕದನಕ್ಕೆ ಸಿದ್ಧವಾಗಿರುವ ಪ್ರಬಲ ಆಸ್ಚ್ರೇಲಿಯಾ ತಂಡಕ್ಕೆ ಸೆಮೀಸ್ ಕದನಕ್ಕೂ ಮೊದಲೇ ಭಾರಿ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಸ್ಫೋಟಕ ಬ್ಯಾಟ್ಸ್ ಮನ್ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
ಹೌದು.. ಆಸ್ಟ್ರೇಲಿಯಾ ತಂಡದ ಅನುಭವಿ ಎಡಗೈ ಬ್ಯಾಟ್ಸ್ ಮನ್ ಶಾನ್ ಮಾರ್ಶ್ ಮುಂಗೈ ಮೂಳೆ ಮುರಿತಕ್ಕೊಳಗಾಗಿದ್ದು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಈಗಾಗಲೆ ವಿಶ್ವಕಪ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಆಗುವ ನಿರೀಕ್ಷೆಯಲ್ಲಿದೆ. ಅದಕ್ಕೂ ಮೊದಲೇ ಶಾನ್ ಮಾರ್ಶ್ ಗಾಯಗೊಂಡಿರುವುದು ಆಸಿಸ್ ತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ನಾಳೆ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದ್ದು, ಇದಕ್ಕಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ತಂಡದ ಅನುಭವಿ ಬ್ಯಾಟ್ಸ್ ಮನ್ ಶಾನ್ ಮಾರ್ಶ್ ಗಾಯಗೊಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ತಂಡದ ಕೋಚ್ ಜಸ್ಟಿನ್ ಲ್ಯಾಂಗರ್ ಅವರು, 'ಅಭ್ಯಾಸದ ವೇಳೆ ಪ್ಯಾಟ್ ಕಮ್ಮಿನ್ಸ್ ಎಸೆದ ಚೆಂಡು ಶಾನ್ ಮಾರ್ಶ್ ಮುಂಗೈಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ಚೆಂಡು ಬಲವಾಗಿ ಕೈಗೆ ಬಡಿದಿರುವುದರಿಂದ ಮೂಳೆ ಮುರಿದಿದೆ. ಮಾರ್ಶ್ ಗೆ ಸರ್ಜರಿ ಅಗತ್ಯವಾಗಿರುವುದರಿಂದ ತಂಡದಿಂದ ಅವರನ್ನು ಕೈಬಿಡಲಾಗಿದೆ. ಇವರ ಜಾಗಕ್ಕೆ ಯುವ ವಿಕೆಟ್ ಕೀಪರ್ ಪೀಟರ್ ಹ್ಯಾಂಡ್ಸ್ ಕಾಂಬ್ ಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮಾರ್ಶ್ ಅಲ್ಲದೆ ಮತ್ತೊಬ್ಬ ಆಲ್ ರೌಂಡರ್ ಮ್ಯಾಕ್ಸ್ ವೆಲ್ಗೂ ಕೂಡ ಅಭ್ಯಾಸದ ವೇಳೆ ಸ್ಟಾರ್ಕ್ ಬೌಲಿಂಗ್ ನಲ್ಲಿ ಚೆಂಡಿನಿಂದ ಬಡಿಸಿಕೊಂಡು ಗಾಯಗೊಂಡಿದ್ದರು. ಅದರೆ ಮ್ಯಾಕ್ಸ್ ವೆಲ್ ಗಾಯ ಗಂಭೀರವಾಗಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Londonಲಂಡನ್ಆಸ್ಟ್ರೇಲಿಯಾAustraliaICC World Cup 2019ಐಸಿಸಿ ವಿಶ್ವಕಪ್ 2019Shaun Marshಶಾನ್ ಮಾರ್ಶ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


