ಈ 2 ಬಲಿಷ್ಠ ತಂಡಗಳೇ ಫೈನಲ್ ಪ್ರವೇಶಿಸೋದು; ಪೀಟರ್ಸನ್ ತಲೆಯಲ್ಲಿ ಏನಿದೆ?
ವಿಶ್ವಕಪ್ ಟೂರ್ನಿಯಲ್ಲಿ ಸದ್ಯ ನಾಲ್ಕು ಬಲಿಷ್ಠ ತಂಡಗಳು ಸೆಮಿಫೈನಲ್ ನಲ್ಲಿ ಸೆಣೆಸಲಿವೆ. ಭಾರತ-ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾ ಇಂಗ್ಲೆಂಡ್ ಈ ನಾಲ್ಕು ತಂಡಗಳ...

Published On :
ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಸದ್ಯ ನಾಲ್ಕು ಬಲಿಷ್ಠ ತಂಡಗಳು ಸೆಮಿಫೈನಲ್ ನಲ್ಲಿ ಸೆಣೆಸಲಿವೆ. ಭಾರತ-ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾ ಇಂಗ್ಲೆಂಡ್ ಈ ನಾಲ್ಕು ತಂಡಗಳ ಪೈಕಿ ಈ ಎರಡು ತಂಡಗಳು ಫೈನಲ್ ಪ್ರವೇಶಿಸಲಿವೆ ಎಂದು ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಕೇವಿನ್ ಪೀಟರ್ಸನ್ ಭವಿಷ್ಯ ನುಡಿದಿದ್ದಾರೆ.
ಮೊದಲ ಸೆಮಿಫೈನಲ್ ನಾಳೆ ಭಾರತ-ನ್ಯೂಜಿಲ್ಯಾಂಡ್ ನಡುವೆ ನಡೆಯಲಿದೆ. ಸೆಮಿಫೈನಲ್ ಹಂತದಲ್ಲಿ ಪೀಟರ್ಸನ್ ಫೈನಲ್ ಪಂದ್ಯಗ ಬಗ್ಗೆ ಮಾತನಾಡಿದ್ದಾರೆ. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಇಂಗ್ಲೆಂಡ್ ಬಗ್ಗುಬಡಿಯಲಿದೆ. ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಜಯಗಳಿಸಿ ಫೈನಲ್ ಪ್ರವೇಶಿಸಲಿದೆ ಎಂದು ಪೀಟರ್ಸನ್ ಹೇಳಿದ್ದಾರೆ.
ಅಲ್ಲಿಗೆ ವಿಶ್ವಕಪ್ ಫೈನಲ್ ನಲ್ಲಿ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ ಎಂದು ಪೀಟರ್ಸನ್ ಹೇಳಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ಜಡೇಜಾ ಆಡಬೇಕಿದೆ. ಕುಲದೀಪ್ ಬದಲಿಗೆ ಮೊಹಮ್ಮದ್ ಶಮಿ ಮತ್ತು ದಿನೇಶ್ ಕಾರ್ತಿಕ್ ಬದಲಿಗೆ ರವೀಂದ್ರ ಜಡೇಜಾ ಆಡಬೇಕು. ಇನ್ನು ಇಂಗ್ಲೆಂಡ್ ಗೆ ಈ ಪಂದ್ಯ ಸುಲಭವಾಗಿರಲಿದೆ ಎಂದು ಟ್ವೀಟ್ ಮಾಡಿದ್ದಾರೆ.
We’ll whack the Aussies!
— Kevin Pietersen
Eng v India FINAL!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


