ಭಾರತ-ನ್ಯೂಜಿಲ್ಯಾಂಡ್ ಸೆಮೀಸ್ ಪಂದ್ಯ ಮಳೆಯಿಂದ ರದ್ದಾದರೆ? ಫೈನಲ್‌ಗೇರಲು ಟೀಂ ಇಂಡಿಯಾಗೀದಿಯಾ ಛಾನ್ಸ್!
ವಿಶ್ವಕಪ್ ಟೂರ್ನಿ ರೋಚಕ ಘಟ್ಟಕ್ಕೆ ಬಂದು ತಲುಪಿದ್ದು ನಾಳೆ ಟೀಂ ಇಂಡಿಯಾ-ನ್ಯೂಜಿಲ್ಯಾಂಡ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದ್ದು ಮಳೆಯಿಂದ ಪಂದ್ಯ ರದ್ದಾದರೆ...

Published On :
ಲಂಡನ್: ವಿಶ್ವಕಪ್ ಟೂರ್ನಿ ರೋಚಕ ಘಟ್ಟಕ್ಕೆ ಬಂದು ತಲುಪಿದ್ದು ನಾಳೆ ಟೀಂ ಇಂಡಿಯಾ-ನ್ಯೂಜಿಲ್ಯಾಂಡ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದ್ದು ಮಳೆಯಿಂದ ಪಂದ್ಯ ರದ್ದಾದರೆ ಫೈನಲ್ ಗೆ ಭಾರತ ನೇರವಾಗಿ ತಲುಪಬಹುದೇ ಇಲ್ಲಿದೆ ಮಾಹಿತಿ.
ನಾಳಿನ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಬಹುದು. ಇದೊಂದು ಆತಂಕ ಉಭಯ ತಂಡಗಳಿಗೂ ಎದುರಾಗಿದೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ ಎಂದು ಏನಾಗುತ್ತದೆ ಎಂಬ ಆತಂಕ ಸೃಷ್ಟಿ ಮಾಡಿದೆ.
ಭಾರತ-ನ್ಯೂಜಿಲ್ಯಾಂಡ್ ನಡುವಿನ ಸೆಮಿಫೈನಲ್ ಪಂದ್ಯಕ್ಕೆ ಮಳೆಯ ಮುನ್ಸೂಚನೆ ಇರುವುದು ಅಭಿಮಾನಿಗಳ ಉತ್ಸಾಹವನ್ನು ಕುಗ್ಗಿಸಬಹುದು. ಪಂದ್ಯ ಮಳೆಯಿಂದ ರದ್ದಾದರೆ ಅದಕ್ಕೂ ಮೀಸಲು ದಿನವಿದೆ. ಅದು ಬುಧವಾರವೂ ನಡೆಯಬಹುದು.
ಇನ್ನು ಮೀಸಲು ದಿನವೂ ಪಂದ್ಯ ಮಳೆಯಿಂದ ರದ್ದಾದರೆ ಅಂಕಪಟ್ಟಿಯಲ್ಲಿ 15 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಫೈನಲ್ ಗೆ ನೇರವಾಗಿ ಪ್ರವೇಶಿಸಬಹುದು. ಇನ್ನು 11 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್ ಫೈನಲ್ ಗೇರುವ ಅವಕಾಶದಿಂದ ವಂಚಿತವಾಗಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


