ಐಸಿಸಿ ವಿಶ್ವಕಪ್ 2019: ಕಿವೀಸ್ ವಿರುದ್ಧ ಮೊದಲ ಸೆಮಿ ಫೈನಲ್ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯಾಗೆ ಗಾಯ!
ಐಸಿಸಿ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಇಂದು ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ತಂಡದ ಪ್ರಮುಖ ಆಟಗಾರ ಹಾರ್ದಿಕ್ ಪಾಂಡ್ಯಾ ಗಾಯದ ಸಮಸ್ಯೆಗೆ ತುತ್ತಾಗಿ ಆತಂಕ ಮೂಡಿಸಿದ್ದರು.

Published On :
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಇಂದು ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ತಂಡದ ಪ್ರಮುಖ ಆಟಗಾರ ಹಾರ್ದಿಕ್ ಪಾಂಡ್ಯಾ ಗಾಯದ ಸಮಸ್ಯೆಗೆ ತುತ್ತಾಗಿ ಆತಂಕ ಮೂಡಿಸಿದ್ದರು.
ಇಂದು ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಬೌಲಿಂಗ್ ಮಾಡುವ ವೇಳೆ ಹಾರ್ದಿಕ್ ಪಾಂಡ್ಯಾ ಗಾಯದ ಸಮಸ್ಯೆಗೆ ತುತ್ತಾಗಿದ್ದರು.
ನ್ಯೂಜಿಲೆಂಡ್ ಇನ್ನಿಂಗ್ಸ್ ನ 16ನೇ ಓವರ್ ನ ವೇಳೆ ಹಾರ್ದಿಕ್ ಪಾಂಡ್ಯ ತೊಡೆಸಂದು ಸ್ನಾಯು ಸೆಳೆತಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಪೆವಿಲಿಯನ್ ಗೆ ಕಳುಹಿಸಿದ ನಾಯಕ ಕೊಹ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದರು. ಬಳಿಕ ಡ್ರೆಸಿಂಗ್ ರೂಂಗೆ ತೆರಳಿದ ಪಾಂಡ್ಯಾರನ್ನು ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಚಿಕಿತ್ಸೆಗೊಳಪಡಿಸಿದರು.
ಆ ಬಳಿಕ ಸುಮಾರು 4 ಓವರ್ ಗಳಷ್ಟು ಸಮಯ ಪಾಂಡ್ಯಾ ವಿಶ್ರಾಂತಿ ಪಡೆದು, ಮತ್ತೆ ಮೈದಾನಕ್ಕೆ ಆಗಮಿಸಿದರು. ಈ ವೇಳೆ ಅಭಿಮಾನಿಗಳಲ್ಲಿನ ಆತಂಕ ದೂರವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Londonಲಂಡನ್indiaಭಾರತನ್ಯೂಜಿಲೆಂಡ್NewzealandHardik Pandyaಹಾರ್ದಿಕ್ ಪಾಂಡ್ಯಾICC World Cup 2019ಐಸಿಸಿ ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


