ಐಸಿಸಿ ವಿಶ್ವಕಪ್ 2019: ಮೊದಲ ಸೆಮಿ ಫೈನಲ್ ನಲ್ಲಿ ಐತಿಹಾಸಿಕ ದಾಖಲೆ ಬರೆದ ಎಂಎಸ್ ಧೋನಿ
ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ ಐತಿಹಾಸಿಕ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

Published On :
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ ಐತಿಹಾಸಿಕ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಹೌದು.. ಇಂದು ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಪರ ಮತ್ತೆ ವಿಕೆಟ್ ಕೀಪಿಂಗ್ ಗೆ ಇಳಿಯುವ ಮೂಲಕ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಲೋಕದ ಅತ್ಯಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಧೋನಿ ಈ ಪಂದ್ಯದ ಮೂಲಕ ಭಾರತದ ಪರ ಅತೀ ಹೆಚ್ಚು ಬಾರಿ ವಿಕೆಟ್ ಕೀಪಿಂಗ್ ಮಾಡಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅಲ್ಲದೆ ಅತೀ ಹೆಚ್ಚು ಪಂದ್ಯಗಳಲ್ಲಿ ವಿಕೆಟ್ ಕೀಪಿಂಗ್ ಮಾಡಿದ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟಿಗ ಎಂಬ ಕೀರ್ತಿಗೂ ಧೋನಿ ಭಾಜನರಾಗಿದ್ದಾರೆ.
ಅಂದಹಾಗೆ ಧೋನಿ ಈ ಪಂದ್ಯದ ಮೂಲಕ 350ನೇ ಬಾರಿ ಭಾರತ ತಂಡದ ಪರ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ. ಧೋನಿ ಇದುವರೆಗೆ ಭಾರತದ ಪರ 346 ಮತ್ತು ಏಷ್ಯಾ ಇಲೆವೆನ್ ಪರವಾಗಿ 3 ಸೇರಿ ಒಟ್ಟು 350 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 350 ಪಂದ್ಯಗಳ ಪೈಕಿ 200 ಪಂದ್ಯಗಳಲ್ಲಿ ಅವರು ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಭಾರತದ ಪರ ಇದು ದೊಡ್ಡ ದಾಖಲೆಯಾಗಿದೆ.
ಆ ಮೂಲಕ ಧೋನಿ 350 ಪಂದ್ಯಗಳನ್ನು ಆಡಿದ ಸಾಧನೆ ಮಾಡಿದ ವಿಶ್ವದ 10ನೇ ಆಟಗಾರ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ. ಭಾರತದ ಸಚಿನ್ ತೆಂಡುಲ್ಕರ್ 463 ಏಕದಿನ ಪಂದ್ಯ ಆಡಿದ್ದು, ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅಂತೆಯೇ ಶ್ರೀಲಂಕಾದ ಮಹೇಲ ಜಯವರ್ಧನೆ (448), ಸನತ್ ಜಯಸೂರ್ಯ (445), ಕುಮಾರ ಸಂಗಕ್ಕಾರ (404), ಪಾಕಿಸ್ತಾನದ ಶಾಹೀದ್ ಆಫ್ರಿದಿ (398), ಇನ್ಜಮಾಮ್ ಉಲ್ ಹಕ್ (378), ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಟಿಂಗ್ (375), ಪಾಕಿಸ್ತಾನದ ವಾಸಿಂ ಅಕ್ರಂ (356) ಮತ್ತು ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (350 ಪಂದ್ಯಗಳು) ನಂತರದಲ್ಲಿ ಸ್ಥಾನದಲ್ಲಿರುವ ಆಟಗಾರರಾಗಿದ್ದಾರೆ.
ಶ್ರೀಲಂಕಾದ ಕುಮಾರ ಸಂಗಕ್ಕಾರ 360 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ ಕಾರ್ಯನಿರ್ವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Londonindiaಭಾರತನ್ಯೂಜಿಲೆಂಡ್ಎಂಎಸ್ ಧೋನಿNewzealandICC World Cup 2019ಐಸಿಸಿ ವಿಶ್ವಕಪ್ 2019MS Dhoni ಲಂಡನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


