ಐಸಿಸಿ ವಿಶ್ವಕಪ್ 2019: ಕೊಹ್ಲಿ ಪ್ರಕಾರ ವಿಶ್ವದ ಶ್ರೇಷ್ಟ ಬ್ಯಾಟ್ಸ್ ಮನ್ ಇವರೇ..!
ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಆಗ್ರ ಸ್ಥಾನಿಯಾಗಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರಕಾರ ಪ್ರಸ್ತುತ ಸಂದರ್ಭದಲ್ಲಿ ವಿಶ್ವದ ಶ್ರೇಷ್ಠ ಬ್ಯಾಟ್ಸಮನ್ ಇವರೇ ಅಂತೆ...

Published On :
ಲಂಡನ್: ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಆಗ್ರ ಸ್ಥಾನಿಯಾಗಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರಕಾರ ಪ್ರಸ್ತುತ ಸಂದರ್ಭದಲ್ಲಿ ವಿಶ್ವದ ಶ್ರೇಷ್ಠ ಬ್ಯಾಟ್ಸಮನ್ ಇವರೇ ಅಂತೆ...
ಹೌದು.. ಇಡೀ ವಿಶ್ವವೇ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಗೆ ಮಾರುಹೋಗಿದ್ದು, ಕೊಹ್ಲಿಯನ್ನು ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಎಂದು ಕರೆಯಲಾಗುತ್ತಿದೆ. ಆದರೆ ಇದೇ ಕೊಹ್ಲಿಯೇ ಮತ್ತೋರ್ವ ಬ್ಯಾಟ್ಸ್ ಮನ್ ನನ್ನು ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಎಂದು ಕರೆದಿದ್ದಾರೆ. ಇಷ್ಟಕ್ಕೂ ಆ ಬ್ಯಾಟ್ಸ್ ಮನ್ ಯಾರು ಗೊತ್ತಾ... ಮತ್ತಾರು ಅಲ್ಲ ಭಾರತ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ... ಕೊಹ್ಲಿ ಪ್ರಕಾರ ಪ್ರಸ್ತುತ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಎಂದು ಕೊಂಡಾಡಿದ್ದಾರೆ.
ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಭರ್ಜರಿ ಫಾರ್ಮ್ ನಲ್ಲಿದ್ದು, ಈಗಾಗಲೇ ಟೂರ್ನಿಯಲ್ಲಿ ಐದು ಶತಕಗಳನ್ನು ಸಿಡಿಸಿ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಅಲ್ಲದೆ ವಿಶ್ವಕಪ್ ಇತಿಹಾಸದಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್ ಮನ್ ಎಂಬ ದಾಖಲೆಗೂ ರೋಹಿತ್ ಪಾತ್ರರಾಗಿದ್ದಾರೆ.
ಇಂದು ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ಮೊದಲ ಸೆಮಿಫೈನಲ್ ಪಂದ್ಯ ಇದ್ದು, ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಫೈನಲ್ ಹಂತಕ್ಕೇರಲು ಸೆಣಸಾಡಲಿದೆ. ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಧೋನಿ ಮತ್ತು ಕೆಎಲ್ ರಾಹುಲ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದು, ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್ ಮತ್ತು ಯಾರ್ಕರ್ ಕಿಂಗ್ ಬುಮ್ರಾ ನಿರ್ಣಾಯಕರಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Londonಲಂಡನ್Virat Kohliವಿರಾಟ್ ಕೊಹ್ಲಿRohit Sharmaರೋಹಿತ್ ಶರ್ಮಾICC World Cup 2019ಐಸಿಸಿ ವಿಶ್ವಕಪ್ 2019
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


