ಐಸಿಸಿ ವಿಶ್ವಕಪ್ 2019, ಮೊದಲ ಸೆಮಿಫೈನಲ್: ಆರಂಭಿಕ ಆಘಾತದಿಂದ ಹೊರಬಂದ ಕಿವೀಸ್, 69-2
ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ವಿಶ್ವಕಪ್ 2019ರ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ತಂಡ ಆರಂಭಿಕ ಆಘಾತದಿಂದ ಹೊರಬಂದಿದೆ.

Published On :
ಲಂಡನ್: ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ವಿಶ್ವಕಪ್ 2019ರ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ತಂಡ ಆರಂಭಿಕ ಆಘಾತದಿಂದ ಹೊರಬಂದಿದೆ.
ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ಇಂದು ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡುತ್ತಿರುವ ನ್ಯೂಜಿಲೆಂಡ್ ತಂಡ 18.2 ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿದೆ. ಪಂದ್ಯದ ಆರಂಭದಲ್ಲೇ ಕೇವಲ 1 ರನ್ ಗಳಿಸಿದ್ದ ಮಾರ್ಟಿನ್ ಗಪ್ಟಿಲ್ ರನ್ನು ಬುಮ್ರಾ ಔಟ್ ಮಾಡುವ ಮೂಲಕ ಕಿವೀಸ್ ಗೆ ಆರಂಭಿಕ ಆಘಾತ ನೀಡಿದರು.
ಆದರೆ ಆ ಬಳಿಕ ಕ್ರೀಸ್ ಗೆ ಬಂದ ನಾಯಕ ಕೇನ್ ವಿಲಿಯಮ್ಸನ್, ಹೆನ್ರಿ ನಿಕೋಲಸ್ ಜೊತೆಗೂಡಿ ತಂಡವನ್ನು ಆರಂಭಿಕ ಆಘಾತದಿಂದ ಮೇಲೆತ್ತುವ ಪ್ರಯತ್ನ ಮಾಡಿದರು. ಇಬ್ಬರೂ ಆಟಗಾರರು ರಕ್ಷಣಾತ್ಮಕ ಆಟದ ಮೊರೆ ಹೋಗಿ ನಿಧಾನಗತಿಯಲ್ಲೇ ರನ್ ಕದಿಯುತ್ತಾ 18.2 ಓವರ್ ನಲ್ಲಿ 69ರನ್ ಗಳಿಸಿದರು. ಈ ಹಂತದಲ್ಲಿ ಜಡೇಜಾ ಬೌಲಿಂಗ್ ನಲ್ಲಿ ಹೆನ್ರಿ ನಿಕೋಲಸ್ ಕ್ಲೀನ್ ಬೋಲ್ಡ್ ಆಗುವುದರೊಂದಿಗೆ ಕಿವೀಸ್ ಪಡೆಯ ಮತ್ತೊಂದು ವಿಕೆಟ್ ಪತನವಾಗಿದೆ.
ಇತ್ತೀಚಿನ ವರದಿಗಳ ಬಂದಾಗ ವಿಲಿಯಮ್ಸನ್ ಪಡೆ 19 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 70 ರನ್ ಗಳಿಸಿದೆ. ಭಾರತದ ಪರ ಜಸ್ ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


