ವಿಶ್ವಕಪ್: ಮೊದಲ ಸೆಮಿಫೈನಲ್ ಗೆ ಮಳೆ ಅಡ್ಡಿ, ಪಂದ್ಯ ನಾಳೆಗೆ ಮುಂದೂಡಿಕೆ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಪಂದ್ಯವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

Published On :
ಲಂಡನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಪಂದ್ಯವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.
ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯಕ್ಕೆ ಭಾರಿ ಮಳೆ ಅಡ್ಡಿಪಡಿಸಿದ್ದು, ಪ್ರಸ್ತುತ ಆಟ ನಿಂತಿದೆ. ಇತ್ತೀಚಿನ ವರದಿಗಳು ಬಂದಾಗ ಮೈದಾನದಲ್ಲಿ ಮಳೆ ಮುಂದುವರೆದಿದ್ದು, ರೆಫರಿ ಡೇವಿಡ್ ಬೂನ್ ಪಂದ್ಯವನ್ನು ಬುಧವಾರಕ್ಕೆ ಮುಂದೂಡಿದ್ದಾರೆ.
ಭಾರತೀಯ ಕಾಲಮಾನದ ಪ್ರಕಾರ ಇಂದು ಮಧ್ಯಾಹ್ನ 3.00 ಗಂಟೆಗೆ ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯ ಮುಂದುವರೆಯಲಿದೆ.
ಇಂದು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, 46.1 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿದ್ದು, ನಾಳೆ ಪಂದ್ಯ ಮುಂದುವರೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CricketindiaಭಾರತNew Zealandನ್ಯೂಜಿಲೆಂಡ್ಐಸಿಸಿ ವಿಶ್ವಕಪ್ICC World Cuppushed to reserve dayಪಂದ್ಯ ಮುಂದೂಡಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


