ಐಸಿಸಿ ವಿಶ್ವಕಪ್ 2019, ಮೊದಲ ಸೆಮಿ ಫೈನಲ್: ಭಾರತಕ್ಕೆ ಗೆಲ್ಲಲು 240 ರನ್ ಗಳ ಗುರಿ ನೀಡಿದ ಕಿವೀಸ್
ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ತಂಡ 240 ರನ್ ಗಳ ಗುರಿ ನೀಡಿದೆ.

Published On :
ಲಂಡನ್: ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ತಂಡ 240 ರನ್ ಗಳ ಗುರಿ ನೀಡಿದೆ.
ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ಇಂದು ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿದೆ. ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ (67 ರನ್) ಮತ್ತು ರಾಸ್ ಟೇಲರ್ (74 ರನ್) ಅರ್ಧಶತಕ ಸಿಡಿಸಿ ತಂಡ ಅಲ್ಪ ಮೊತ್ತಕ್ಕೆ ಕುಸಿಯುವುದರಿಂದ ತಡೆದರು. ನಿನ್ನೆ ಮಳೆಯಿಂದಾಗಿ ಆಟ ನಿಂತು ಇಂದು ಮತ್ತೆ ಆಟ ಮುಂದುವರೆದಿತ್ತು.
ಇದೀಗ ನ್ಯೂಜಿಲೆಂಡ್ ತಂಡ ನಿಗದಿತ 50 ಓವರ್ ಗಳಲ್ಲಿ 239 ರನ್ ಗಳಿಸಿ, ಭಾರತಕ್ಕೆ ಗೆಲ್ಲಲು 240ರನ್ ಗಳ ಸವಾಲಿನ ಗುರಿ ನೀಡಿದೆ.
ಇನ್ನು ಭಾರತದ ಪರ ಭುವನೇಶ್ವರ್ ಕುಮಾರ್ 3 ವಿಕೆಟ್ ಕಬಳಿಸಿ ಯಶಸ್ವೀ ಬೌಲರ್ ಎನಿಸಿದರೆ, ಜಸ್ ಪ್ರೀತ್ ಬುಮ್ರಾ, ಯಜುವೇಂದ್ರ ಚಹಲ್, ಹಾರ್ದಿಕ್ ಪಾಂಡ್ಯ, ಹಾಗೂ ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


