ಐಸಿಸಿ ವಿಶ್ವಕಪ್ 2019: ಕಿವೀಸ್ ಬೌಲಿಂಗ್ ದಾಳಿಗೆ ಸೆಡ್ಡು ಹೊಡೆದ ಜಡ್ಡು, ತಿರುಗಿ ಬಿದ್ದ ಭಾರತ
ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯ ಕುತೂಹಲಕಾರಿ ಘಟ್ಟ ತಲುಪಿದ್ದು, ಕೆಳಕ್ರಮಾಂಕದ ಬ್ಯಾಟ್ಸ್ ಮನ್ ಆಲ್ರೌಂಡರ್ ರವೀಂದ್ರ ಜಡೇಜಾ ಅರ್ಧಶತಕ ಸಿಡಿಸಿದ್ದಾರೆ.

Published On :
ಲಂಡನ್: ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯ ಕುತೂಹಲಕಾರಿ ಘಟ್ಟ ತಲುಪಿದ್ದು, ಕೆಳಕ್ರಮಾಂಕದ ಬ್ಯಾಟ್ಸ್ ಮನ್ ಆಲ್ರೌಂಡರ್ ರವೀಂದ್ರ ಜಡೇಜಾ ಅರ್ಧಶತಕ ಸಿಡಿಸಿದ್ದಾರೆ.
ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಆರಂಭಿಕ ಮರ್ಮಾಘಾತಕ್ಕೊಳಗಾಗಿದ್ದ ಭಾರತ ತಂಡ ಪ್ರಸ್ತುತ ಚೇತೋಹಾರಿ ಪ್ರದರ್ಶನ ನೀಡುತ್ತಿದ್ದು, ಕ್ರೀಸ್ ನಲ್ಲಿರುವ ಎಂಎಸ್ ಧೋನಿ ಹಾಗೂ ರವೀಂದ್ರ ಜಡೇಜಾ ಗೆಲುವಿಗಾಗಿ ತಮ್ಮ ಹೋರಾಟ ನಡೆಸುತ್ತಿದ್ದಾರೆ.
ಕೇವಲ 92 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ರವೀಂದ್ರ ಜಡೇಜಾ ಮತ್ತು ಧೋನಿ ಆಪದ್ಭಾಂಧವರಾಗಿ ನಿಂತಿದ್ದು, ಆರ್ಧಶತಕ ಸಿಡಿಸಿರುವ ಜಡೇಜಾ ಮತ್ತು 35 ರನ್ ಗಳಿಸಿರುವ ಧೋನಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಇತ್ತೀಚಿನ ವರದಿಗಳು ಬಂದಾಗ ಭಾರತ ತಂಡ 46 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದ್ದು, ಭಾರತ ಗೆಲ್ಲಲು 24 ಎಸೆತಗಳಲ್ಲಿ 42 ರನ್ ಗಳಿಸಬೇಕಿದೆ. ಪ್ರಸ್ತುತ 74 ರನ್ ಗಳಿಸಿರುವ ರವೀಂದ್ರ ಜಡೇಜಾ ಮತ್ತು 35 ರನ್ ಗಳಿಸಿರುವ ಧೋನಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕ್ರಿಕೆಟ್Londonಲಂಡನ್indiaಭಾರತMS Dhoniನ್ಯೂಜಿಲೆಂಡ್ಎಂಎಸ್ ಧೋನಿNewzealandCricket OffbeatICC World Cup 2019ಐಸಿಸಿ ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


